Connect with us

Dvgsuddi Kannada | online news portal | Kannada news online

ನಾಳೆ ಜಿಲ್ಲೆಯಾದ್ಯಂತ ಬೃಹತ್ ಲಸಿಕಾ ಕಾರ್ಯಕ್ರಮ ;ದಾವಣಗೆರೆ ತಾಲ್ಲೂಕಿಗೆ 25,100 ಡೋಸ್ ಲಭ್ಯ

ದಾವಣಗೆರೆ

ನಾಳೆ ಜಿಲ್ಲೆಯಾದ್ಯಂತ ಬೃಹತ್ ಲಸಿಕಾ ಕಾರ್ಯಕ್ರಮ ;ದಾವಣಗೆರೆ ತಾಲ್ಲೂಕಿಗೆ 25,100 ಡೋಸ್ ಲಭ್ಯ

ದಾವಣಗೆರೆ: ಕೋವಿಡ್-19 ವೈರಸ್ ಸಾಂಕ್ರಾಮಿಕ ರೋಗಕ್ಕೆ ಸಂಬಂಧಿಸಿದಂತೆ ಜಿಲ್ಲೆಯಾದ್ಯಂತ ಸೆ. 29 ರಂದು ಬೃಹತ್ ಪ್ರಮಾಣದಲ್ಲಿ ಕೋವಿಡ್ ಲಸಿಕೆ ನೀಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಇದುವರೆಗೂ ಲಸಿಕೆ ಪಡೆಯದೇ ಇರುವ ಅರ್ಹ ವ್ಯಕ್ತಿಗಳು ತಪ್ಪದೆ ಲಸಿಕೆ ಪಡೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಅವರು ಮನವಿ ಮಾಡಿದ್ದಾರೆ.

ಜಿಲ್ಲೆಯ ನಗರ ಪ್ರದೇಶದ ಪ್ರತಿ ವಾರ್ಡ್‍ಗಳಲ್ಲಿ ಹಾಗೂ ಪ್ರತಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಸರ್ಕಾರಿ ಆಸ್ಪತ್ರೆಗಳಲ್ಲಿ ಸೆ.29 ರಂದು ಬೆಳಿಗ್ಗೆ 8 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಲಸಿಕಾಕರಣವನ್ನು ಹಮ್ಮಿಕೊಂಡಿರುವುದರಿಂದ ಸಾರ್ವಜನಿಕರು ಕೋವಿಡ್ ಮೊದಲನೇ ಹಾಗೂ ಎರಡನೇ ಡೋಸ್ ಲಸಿಕೆಯನ್ನು ಹಾಕಿಸಿಕೊಳ್ಳುವ ಮೂಲಕ ಸದುಪಯೋಗ ಪಡೆದುಕೊಳ್ಳುವಂತೆ ಜಿಲ್ಲಾಧಿಕಾರಿಗಳು ಮತ್ತು ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರಾದ ಮಹಾಂತೇಶ ಬೀಳಗಿ ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.

ದಾವಣಗೆರೆ ತಾಲ್ಲೂಕಿಗೆ 25100 ಡೋಸ್ ಲಸಿಕೆ:ದಾವಣಗೆರೆ ತಾಲ್ಲೂಕಿನಲ್ಲಿ ಎಲ್ಲ ಗ್ರಾಮ ಪಂಚಾಯತ್‍ಗಳು, ಚಿಗಟೇರಿ ಜಿಲ್ಲಾ ಆಸ್ಪತ್ರೆ, ಪ್ರಾಥಮಿಕ, ಸಮುದಾಯ ಆರೋಗ್ಯ ಸಂಸ್ಥೆ ಹಾಗೂ ನಗರ ಆರೋಗ್ಯ ಕೇಂದ್ರಗಳಲ್ಲಿ 19600 ಡೋಸ್ ಕೋವಿಶೀಲ್ಡ್ ಮತ್ತು 5500 ಕೋವ್ಯಾಕ್ಸಿನ್ ಒಟ್ಟು 25100 ಡೋಸ್ ಲಸಿಕೆ ನೀಡುವ ಗುರಿ ಹೊಂದಲಾಗಿದೆ ಎಂದು ತಾಲ್ಲೂಕು ಆರೋಗ್ಯಾಧಿಕಾರಿ ಡಾ. ಎಲ್.ಡಿ. ವೆಂಕಟೇಶ್ ತಿಳಿಸಿದ್ದಾರೆ.

18 ವರ್ಷ ಮೇಲ್ಪಟ್ಟ ಎಲ್ಲ ಅರ್ಹ ವ್ಯಕ್ತಿಗಳು ಮೊದಲ ಹಾಗೂ ಎರಡನೆ ಡೋಸ್ ಲಸಿಕೆಯನ್ನು ಹಾಕಿಸಿಕೊಳ್ಳಬಹುದಾಗಿದೆ. ಕೋವಿಡ್ ನಿರೋಧಕ ಲಸಿಕಾಕರಣದ ಪ್ರಗತಿ ವೃದ್ಧಿಯ ಉದ್ದೇಶದಿಂದ ಪ್ರತಿ ಬುಧವಾರ ಬೃಹತ್ ಲಸಿಕಾ ಮೇಳ ಹಮ್ಮಿಕೊಳ್ಳಲಾಗುತ್ತಿದ್ದು, ದಾವಣಗೆರೆ ತಾಲ್ಲೂಕಿನಲ್ಲಿ 43 ಗ್ರಾಮ ಪಂಚಾಯತ್‍ಗಳಿಗೆ 8600 ಡೋಸ್ ಕೋವಿಶೀಲ್ಡ್, ದಾವಣಗೆರೆ ಮಹಾನಗರಪಾಲಿಕೆ ವ್ಯಾಪ್ತಿಯ 45 ವಾರ್ಡ್‍ಗಳಿಗೆ 9000 ಡೋಸ್ ಕೋವಿಶೀಲ್ಡ್ ಮತ್ತು 3900 ಡೋಸ್ ಕೋವ್ಯಾಕ್ಸಿನ್. ನಗರದ 09 ಆರೋಗ್ಯ ಉಪಕೇಂದ್ರಗಳಿಗೆ 1300 ಕೋವಿಶೀಲ್ಡ್ ಮತ್ತು 1600 ಕೋವ್ಯಾಕ್ಸಿನ್, ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ 400 ಕೋವಿಶೀಲ್ಡ್, ಚಿಗಟೇರಿ ಜಿಲ್ಲಾಸ್ಪತ್ರೆಗೆ 300 ಡೊಸ್ ಕೋವಿಶೀಲ್ಡ್ ಲಸಿಕೆ ಹಂಚಿಕೆ ಮಾಡಲಾಗಿದೆ. 18 ವರ್ಷ ಮೇಲ್ಪಟ್ಟ ಎಲ್ಲರೂ 01 ನೇ ಅಥವಾ 02ನೇ ಡೋಸ್ ಲಸಿಕೆ ತಪ್ಪದೆ ಪಡೆಯುವಂತೆ ಮನವಿ ಮಾಡಿದ್ದಾರೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top