Connect with us

Dvgsuddi Kannada | online news portal | Kannada news online

ದಾವಣಗೆರೆ: ನಾಳೆ 11,500 ಡೋಸ್ ಕೋವಿಡ್ ಲಸಿಕೆ ಹಂಚಿಕೆ

covid 19

ಜಗಳೂರು

ದಾವಣಗೆರೆ: ನಾಳೆ 11,500 ಡೋಸ್ ಕೋವಿಡ್ ಲಸಿಕೆ ಹಂಚಿಕೆ

ದಾವಣಗೆರೆ: ಕೋವಿಡ್-19 ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ನಾಳೆ (ಅ. 02)  ದಾವಣಗೆರೆ ತಾಲ್ಲೂಕಿನಲ್ಲಿ ಚಿಗಟೇರಿ ಜಿಲ್ಲಾ ಆಸ್ಪತ್ರೆ, ಪ್ರಾಥಮಿಕ, ಸಮುದಾಯ ಆರೋಗ್ಯ ಸಂಸ್ಥೆ ಹಾಗೂ ನಗರ ಆರೋಗ್ಯ ಕೇಂದ್ರಗಳಲ್ಲಿ 8500 ಡೋಸ್ ಕೋವಿಶೀಲ್ಡ್ ಮತ್ತು 3000 ಕೋವ್ಯಾಕ್ಸಿನ್ ಒಟ್ಟು 11500 ಡೋಸ್ ಲಸಿಕೆ ನೀಡುವ ಗುರಿ ಹೊಂದಲಾಗಿದೆ ಎಂದು ತಾಲ್ಲೂಕು ಆರೋಗ್ಯಾಧಿಕಾರಿ ಡಾ. ಎಲ್.ಡಿ. ವೆಂಕಟೇಶ್ ತಿಳಿಸಿದ್ದಾರೆ.

18 ವರ್ಷ ಮೇಲ್ಪಟ್ಟ ಎಲ್ಲ ಅರ್ಹ ವ್ಯಕ್ತಿಗಳು ಮೊದಲ ಹಾಗೂ ಎರಡನೆ ಡೋಸ್ ಲಸಿಕೆಯನ್ನು ಹಾಕಿಸಿಕೊಳ್ಳಬಹುದಾಗಿದೆ. ನಗರದ 09 ಆರೋಗ್ಯ ಉಪಕೇಂದ್ರಗಳಿಗೆ 4500 ಕೋವಿಶೀಲ್ಡ್ ಮತ್ತು 2700 ಕೋವ್ಯಾಕ್ಸಿನ್, ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ 4000 ಕೋವಿಶೀಲ್ಡ್, ಚಿಗಟೇರಿ ಜಿಲ್ಲಾಸ್ಪತ್ರೆಗೆ 300 ಡೋಸ್ ಕೋವ್ಯಾಕ್ಸಿನ್ ಲಸಿಕೆ ಹಂಚಿಕೆ ಮಾಡಲಾಗಿದೆ. 18 ವರ್ಷ ಮೇಲ್ಪಟ್ಟ ಎಲ್ಲರೂ 01 ನೇ ಅಥವಾ 02ನೇ ಡೋಸ್ ಲಸಿಕೆ ತಪ್ಪದೆ ಪಡೆಯುವಂತೆ ಮನವಿ ಮಾಡಿದ್ದಾರೆ.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಜಗಳೂರು

ದಾವಣಗೆರೆ

Advertisement
Advertisement Enter ad code here

Title

To Top