Connect with us

Dvgsuddi Kannada | online news portal | Kannada news online

ದಾವಣಗೆರೆ: ನಾಳೆ ಬೃಹತ್ ಲಸಿಕಾ ಮೇಳ; 10 ಸಾವಿರ ಲಸಿಕೆ ಹಂಚಿಕೆ

covishild

ಪ್ರಮುಖ ಸುದ್ದಿ

ದಾವಣಗೆರೆ: ನಾಳೆ ಬೃಹತ್ ಲಸಿಕಾ ಮೇಳ; 10 ಸಾವಿರ ಲಸಿಕೆ ಹಂಚಿಕೆ


ದಾವಣಗೆರೆ: ನಗರದ ಪ್ರಾಥಮಿಕ ಆರೋಗ್ಯ ಕೇಂದ್ರ, ಆರೋಗ್ಯ ಕೇಂದ್ರ, ಗ್ರಾಮೀಣ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಚಿಗಟೇರಿ ಜಿಲ್ಲಾ ಆಸ್ಪತ್ರೆಯಲ್ಲಿ ನಾಳೆ (ಅ.18) ಬೃಹತ್ ಲಸಿಕಾ ಮೇಳವನ್ನು ಹಮ್ಮಿಕೊಳ್ಳಲಾಗಿದ್ದು, ತಾಲ್ಲೂಕಿನಲ್ಲಿ ಕೋವಿಶೀಲ್ಡ್ 6000 ಹಾಗೂ ಕೋವ್ಯಾಕ್ಸಿನ್ 4000 ಸೇರಿದಂತೆ ಒಟ್ಟು 10000 ಡೋಸ್ ಲಸಿಕೆ ನೀಡುವ ಗುರಿ ಹೊಂದಲಾಗಿದೆ.

ತಾಲ್ಲೂಕಿನ 25 ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ 2800 ಕೋವಿಶೀಲ್ಡ್, 09 ನಗರ ಆರೋಗ್ಯ ಉಪಕೇಂದ್ರಗಳಲ್ಲಿ 3200 ಡೋಸ್ ಕೋವಿಶೀಲ್ಡ್ ಹಾಗೂ 4000 ಕೋವ್ಯಾಕ್ಸಿನ್, ಚಿಗಟೇರಿ ಜಿಲ್ಲಾಸ್ಪತ್ರೆಯಲ್ಲಿ 500 ಡೋಸ್ ಕೋವಿಶೀಲ್ಡ್ ಸೇರಿದಂತೆ ಅ. 18 ರಂದು ಒಟ್ಟು 10000 ಡೋಸ್ ಲಸಿಕೆ ನೀಡುವ ಗುರಿ ಹೊಂದಲಾಗಿದೆ.
ಕೋವಿಶೀಲ್ಡ್ ಹಾಗೂ ಕೋವ್ಯಾಕ್ಸಿನ್‍ನ ಮೊದಲ ಮತ್ತು ಎರಡನೆ ಡೋಸ್ ಲಸಿಕೆ ನೀಡಲಾಗುವುದು. ಸಾರ್ವಜನಿಕರು ಕೋವಿಡ್ ಪ್ರಕರಣಗಳು ಇಳಿಮುಖವಾಗಿವೆ ಎಂದು ನಿರ್ಲಕ್ಷ್ಯ ತೋರದೇ ಕೋವಿಡ್-19 ಲಸಿಕೆಯ ಸದುಪಯೋಗ ಪಡೆದುಕೊಳ್ಳಬೇಕು ಎಂದು ತಾಲ್ಲೂಕು ಆರೋಗ್ಯ ಅಧಿಕಾರಿ ಡಾ. ಎಲ್.ಡಿ. ವೆಂಕಟೇಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

ದಾವಣಗೆರೆ

Advertisement
Advertisement Enter ad code here

Title

To Top