Connect with us

Dvgsuddi Kannada | online news portal | Kannada news online

ದಾವಣಗೆರೆ: ನ. 1, 2ರಂದು 27, 500 ಕೊರೊನಾ ಲಸಿಕೆ ಹಂಚಿಕೆ

ದಾವಣಗೆರೆ

ದಾವಣಗೆರೆ: ನ. 1, 2ರಂದು 27, 500 ಕೊರೊನಾ ಲಸಿಕೆ ಹಂಚಿಕೆ

ದಾವಣಗೆರೆ:  ಕೋವಿಡ್ ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ದಾವಣಗೆರೆ ತಾಲ್ಲೂಕಿಗೆ ನ. 01 ಮತ್ತು 02 ರಂದು ಒಟ್ಟು 27500 ಕೋವಿಶೀಲ್ಡ್ ಮತ್ತು ಕೋವ್ಯಾಕ್ಸಿನ್ ಲಸಿಕೆಯನ್ನು ಹಂಚಿಕೆ ಮಾಡಲಾಗಿದೆ ಎಂದು ತಾಲ್ಲೂಕು ಆರೋಗ್ಯಾಧಿಕಾರಿ ಡಾ. ಎಲ್.ಡಿ. ವೆಂಕಟೇಶ್ ತಿಳಿಸಿದ್ದಾರೆ.

ನ.01 ಮತ್ತು 02 ರಂದು ದಾವಣಗೆರೆ ನಗರ ವ್ಯಾಪ್ತಿಯಲ್ಲಿರುವ ಎಲ್ಲ 09 ನಗರ ಆರೋಗ್ಯ ಉಪಕೇಂದ್ರಗಳಲ್ಲಿ ಕೋವಿಶೀಲ್ಡ್ ಮತ್ತು ಕೋವ್ಯಾಕ್ಸಿನ್ ಲಸಿಕೆ ನೀಡಲಾಗುವುದು. ತಾಲ್ಲೂಕು ವ್ಯಾಪ್ತಿಯ ಎಲ್ಲ 25 ಪ್ರಾಥಮಿಕ ಆರೋಗ್ಯ ಕೇಂದ್ರಗಳು ಹಾಗೂ ದಾವಣಗೆರೆ ಚಿಗಟೇರಿ ಜಿಲ್ಲಾ ಆಸ್ಪತ್ರೆಯಲ್ಲಿ ಕೋವಿಶೀಲ್ಡ್ ಲಸಿಕೆ ನೀಡಲಾಗುವುದು.

18 ವರ್ಷ ಮೇಲ್ಪಟ್ಟ ಎಲ್ಲರೂ ಕೂಡ ಕೋವಿಡ್ ನಿರೋಧಕ ಲಸಿಕೆಯನ್ನು ತಪ್ಪದೆ ಪಡೆದುಕೊಳ್ಳಬೇಕು. ಇದುವರೆಗೂ ಮೊದಲನೆ ಡೋಸ್ ಪಡೆಯದವರು ಹಾಗೂ ಈಗಾಗಲೆ ಮೊದಲನೆ ಡೋಸ್ ಪಡೆದು, ನಿಗದಿತ ಅವಧಿ ಪೂರ್ಣಗೊಂಡವರು ಎರಡನೆ ಡೋಸ್ ಲಸಿಕೆ ಪಡೆಯಬೇಕು. ಪ್ರಸ್ತುತ ಕೋವಿಡ್ ಪ್ರಕರಣಗಳ ಸಂಖ್ಯೆ ಕಡಿಮೆಯಾಗಿದೆ ಎಂದು ನಿರ್ಲಕ್ಷಿಸಿ, ಲಸಿಕೆ ಹಾಕಿಸಿಕೊಳ್ಳದಿದ್ದಲ್ಲಿ ಅಂತಹವರು ಸೋಂಕಿಗೆ ಒಳಗಾಗಿ ತೀವ್ರ ಆರೋಗ್ಯ ತೊಂದರೆಗೆ ಒಳಗಾಗುವ ಸಾಧ್ಯತೆಗಳಿರುತ್ತವೆ. ಹೀಗಾಗಿ ಸಾರ್ವಜನಿಕರು ಯಾವುದೇ ವದಂತಿಗಳಿಗೆ ಹಾಗೂ ತಪ್ಪು ಕಲ್ಪನೆಗಳಿಗೆ ಒಳಗಾಗದೆ, ಕೋವಿಡ್ ನಿರೋಧಕ ಲಸಿಕೆ ಪಡೆಯಬೇಕು ಎಂದು ತಾಲ್ಲೂಕು ಆರೋಗ್ಯಾಧಿಕಾರಿ ಡಾ. ಎಲ್.ಡಿ. ವೆಂಕಟೇಶ್ ತಿಳಿಸಿದ್ದಾರೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top