ದಾವಣಗೆರೆ: ಜಿಲ್ಲೆಯಲ್ಲಿಂದು 323 ಕೊರೊನಾ ಪಾಸಿಟಿವ್ ಕೇಸ್ ಗಳು ಪತ್ತೆಯಾಗಿದ್ದು, 372 ಮಂದಿ ಸೋಂಕಿನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಒಬ್ಬರು ಸೋಂಕಿನಿಂದ ಸಾವನ್ನಪ್ಪಿದ್ದಾರೆ.
ದಾವಣಗೆರೆಯಲ್ಲಿ 168, ಹರಿಹರ 41, ಜಗಳೂರು 23, ಚನ್ನಗಿರಿ 33, ಹೊನ್ನಾಳಿ 39, ಹೊರ ಜಿಲ್ಲೆಯಿಂದ 19 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಈ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 29,255ಕ್ಕೆ ಏರಿಕೆಯಾಗಿದೆ. ಇದುವರೆಗೆ 25, 801 ಮಂದಿ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಜಿಲ್ಲೆಯಲ್ಲಿ ಒಟ್ಟು 296 ಮಂದಿ ಸಾವನ್ನಪ್ಪಿದ್ದಾರೆ. ಜಿಲ್ಲೆಯಲ್ಲಿ ಇನ್ನೂ 3158 ಸಕ್ರಿಯ ಕೇಸ್ ಗಳಿವೆ. ದಾವಣಗೆರೆ ತಾಲ್ಲೂಕಿನ ನಲ್ಕುಂದ ಗ್ರಾಮದ 70 ವೃದ್ಧ ಸಾವನ್ನಪ್ಪಿದ್ದಾರೆ