ದಾವಣಗೆರೆ: ಜಿಲ್ಲೆಯಲ್ಲಿ ಕೊರೊನಾ ಸೋಂಕು ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಇಂದು ಒಂದೇ ದಿನ 199 ಮಂದಿಯಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಅದರಲ್ಲೂ ದಾವಣಗೆರೆ ತಾಲೂಕು ಒಂದರಲ್ಲಿಯೇ 131 ಸೋಂಕು ಪತ್ತೆಯಾಗಿದೆ. ಹರಿಹರ 04, ಜಗಳೂರು 04, ಚನ್ನಗಿರಿ 34, ಹೊನ್ನಾಳಿ 02 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಈ ಮೂಲಕ ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 23,666ಕ್ಕೆ ಏರಿಕೆಯಾಗಿದೆ. ಕೊರೊನಾದಿಂದ ಇಂದು 42 ಮಂದಿ ಗುಣಮುಖರಾಗಿದ್ದಾರೆ. ಇದುವರೆಗೆ ಒಟ್ಟು 22,648 ಮಂದಿ ಗುಣಮುಖರಾಗಿದ್ದಾರೆ. ಸೋಂಕಿನಿಂದ ಒಟ್ಟು 264 ಮಂದಿ ಗುಣಮುಖರಾಗಿದ್ದಾರೆ. ಸದ್ಯ ಜಿಲ್ಲೆಯಲ್ಲಿ 754 ಸಕ್ರಿಯ ಪ್ರಕರಣಗಳಿವೆ.



