ದಾವಣಗೆರೆ: ಜಿಲ್ಲೆಯಲ್ಲಿಂದು ದಾಖಲೆಯ 672 ಪಾಸಿಟಿವ್ ಕೇಸ್ ಗಳು ಪತ್ತೆಯಾಗಿದ್ದು, 273 ಮಂದಿ ಸೋಂಕಿನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಮೂವರು ಸೋಂಕಿನಿಂದ ಸಾವನ್ನಪ್ಪಿದ್ದಾರೆ.
ದಾವಣಗೆರೆಯಲ್ಲಿ365, ಹರಿಹರ 133, ಜಗಳೂರು 24, ಚನ್ನಗಿರಿ 71, ಹೊನ್ನಾಳಿ 63, ಹೊರ ಜಿಲ್ಲೆಯಿಂದ 63 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಈ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 28, 394 ಕ್ಕೆ ಏರಿಕೆಯಾಗಿದೆ. ಇದುವರೆಗೆ 25, 171 ಮಂದಿ ಡಿಸ್ಚಾರ್ಜ್ ಆಗಿದ್ದಾರೆ. ಜಿಲ್ಲೆಯಲ್ಲಿ ಒಟ್ಟು 293 ಮಂದಿ ಸಾವನ್ನಪ್ಪಿದ್ದಾರೆ. ಜಿಲ್ಲೆಯಲ್ಲಿ ಇನ್ನೂ 2930 ಸಕ್ರಿಯ ಕೇಸ್ ಗಳಿವೆ. ಜಗಳೂರಿನ 44 ವರ್ಷದ ಮಹಿಳೆ, ಹೊಳೆ ಸಿರಿಗೆರೆಯ 60 ವರ್ಷದ ಮಹಿಳೆ, ಪಿಜೆ ಬಡಾವಣೆಯ 64 ವರ್ಷದ ಮಹಿಳೆ ಸಾವನ್ನಪ್ಪಿದ್ದಾರೆ.



