Connect with us

Dvgsuddi Kannada | online news portal | Kannada news online

ದಾವಣಗೆರೆ: ಜಿಲ್ಲಾಧಿಕಾರಿ ನೇತೃತ್ವದಲ್ಲಿ ಕೋವಿಡ್ ಲಸಿಕಾ ಜಾಗೃತಿ ಅಭಿಯಾನ

ಪ್ರಮುಖ ಸುದ್ದಿ

ದಾವಣಗೆರೆ: ಜಿಲ್ಲಾಧಿಕಾರಿ ನೇತೃತ್ವದಲ್ಲಿ ಕೋವಿಡ್ ಲಸಿಕಾ ಜಾಗೃತಿ ಅಭಿಯಾನ

ದಾವಣಗೆರೆ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ತಾಲ್ಲೂಕು ಆರೋಗ್ಯಾಧಿಕಾರಿಗಳು  ಹಾಗೂ ಮಹಾನಗರ ಪಾಲಿಕೆ ಸಹಯೋಗದಲ್ಲಿ ಕೋವಿಡ್ ಲಸಿಕೆ,  ಮಾಸ್ಕ್ ಧರಿಸುವುದು ಹಾಗೂ  ಮುನ್ನೆಚ್ಚರಿಕೆ ಕ್ರಮಗಳ ಕುರಿತು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಅವರು ಅಭಿಯಾನ ನಡೆಸಿ ಜಾಗೃತಿ ಮೂಡಿಸಿದರು.

ಭಾಷಾನಗರ, ಬೀಡಿ ಲೇಔಟ್, ಆಜಾದ್‍ನಗರ, ಮೆಹಬೂಬ್ ನಗರ, ಶಿವ ನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಿಗೆ ಭೇಟಿ ನೀಡಿದ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ, ಉಪವಿಭಾಗಾಧಿಕಾರಿ ಮಮತ ಹೊಸಗೌಡರ್, ತಹಶೀಲ್ದಾರ್ ಗಿರೀಶ್ ಸೇರಿದಂತೆ ಎಲ್ಲಾ ಕಾರ್ಯಕ್ರಮ ಅನುಷ್ಠಾನಾಧಿಕಾರಿಗಳು ಮನೆಮನೆಗೆ ಭೇಟಿ ನೀಡಿ ಅರಿವು ಮೂಡಿಸಿದರು.

ಈ ವೇಳೆ ಆಶಾ ಕಾರ್ಯಕರ್ತೆಯರು ‘ಜನಸಂದಣಿ ಪ್ರದೇಶದಿಂದ ದೂರವಿರಿ’, ‘ನಿಮ್ಮ ಕಣ್ಣು, ಮೂಗು, ಬಾಯಿಗಳನ್ನು ಮುಟ್ಟಿಕೊಳ್ಳಬೇಡಿ’, ‘1977 ಕ್ಕೆ ಮೊದಲು ಹುಟ್ಟಿದ ಎಲ್ಲರೂ ಲಸಿಕೆ ಹಾಕಿಸಿಕೊಳ್ಳಬೇಕು’, ‘ಕೈಗಳನ್ನು ನೈರ್ಮಲ್ಯದೊಂದಿಗೆ ಕಾಪಾಡಿಕೊಳ್ಳಿ’ ಎಂಬಂತಹ ಘೋಷಣೆಗಳೊಂದಿಗೆ ಸಾರ್ವಜನಿಕರಿಗೆ ಜಾಗೃತಿ ಮೂಡಿಸುತ್ತ ಮಾಸ್ಕ್ ವಿತರಿಸಿದರು.

ಜಾಥಾ ಮುಗಿದ ಬಳಿಕ ಆಜಾದ್‍ನಗರ ಪೊಲೀಸ್ ಠಾಣೆಗೆ ಭೇಟಿ ನೀಡಿ, ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ, ಕಳೆದ ವರ್ಷ ಹಳೆ ದಾವಣಗೆರೆ ಕೊರೋನದಂತಹ ಗಂಡಾಂತರ ಎದುರಿಸಿ, ಅದರಿಂದ ಪಾರಾಗಿದೆ ಎಂಬುದು ನಮಗೆಲ್ಲ ತಿಳಿದ ವಿಚಾರ. ಈ ದೃಷ್ಟಿಯಿಂದ ನಾವು ಈ ಭಾಗದಲ್ಲಿ ಹೆಚ್ಚಿನ ಆದ್ಯತೆ ನೀಡಿ, ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು, ಲಸಿಕೆ ಹಾಕಿಸಿಕೊಳ್ಳುವುದು ಹೀಗೆ ಕೋವಿಡ್-19 ಕುರಿತು ಅನೇಕ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರ ಮೂಲಕ ಸಾರ್ವಜನಿಕರಲ್ಲಿ ಅರಿವು ಮೂಡಿಸುತ್ತಿದ್ದೇವೆ ಎಂದರು.

dc masak 2

ಈಗಾಗಲೇ ಜಿಲ್ಲಾದ್ಯಂತ 1 ಲಕ್ಷದ 22 ಸಾವಿರ ಜನರಿಗೆ ಲಸಿಕೆ ಹಾಕಿಸಿದ್ದು, 45 ವರ್ಷದ ಮೇಲ್ಪಟ್ಟ 93 ಸಾವಿರ ಜನರಿಗೆ ಲಸಿಕೆ ನೀಡಲಾಗಿದೆ. ಮುಂದಿನ ದಿನಗಳಲ್ಲಿ ಈ ಸಂಖ್ಯೆ ಹೆಚ್ಚಾಗಬೇಕು. ಆದ ಕಾರಣ ಈ ಭಾಗದ ಸ್ಥಳೀಯ ಕಾರ್ಪೋರೇಟರ್, ಮುಖಂಡರ ಸಮ್ಮುಖದಲ್ಲಿ ಲಸಿಕಾ ಅಭಿಯಾನವನ್ನು ಏರ್ಪಡಿಸಿ ಜನರಲ್ಲಿ ಜಾಗೃತಿ ಮೂಡಿಸುತ್ತಿದ್ದೇವೆ. ಸಾರ್ವಜನಿಕರು ಲಸಿಕಾ ಕಾರ್ಯಕ್ರಮದ ಪ್ರಯೋಜನ ಪಡೆದುಕೊಂಡು ತಮ್ಮನ್ನ ತಾವು ಕೊರೋನಾದಿಂದ ಸಂಭವಿಸುವ ಮರಣದಿಂದ ರಕ್ಷಿಸಿಕೊಳ್ಳಬೇಕು ಎಂದು ಸಾರ್ವಜನಿಕರಲ್ಲಿ ಮನವಿ ಮಾಡಿದರು.

ಡಿಹೆಚ್‍ಒ ಡಾ.ನಾಗರಾಜ್ ಮಾತನಾಡಿ, ಪ್ರಾಥಮಿಕ ಆರೋಗ್ಯ ಕೇಂದ್ರದಡಿ ಈಗಾಗಲೇ 115 ಉಪಕೇಂದ್ರಗಳಲ್ಲಿ ವ್ಯಾಕ್ಸಿನೇಷನ್ ನೀಡಲಾಗುತ್ತಿದ್ದು, ಪ್ರತಿ ಒಂದು ಉಪಕೇಂದ್ರಕ್ಕೆ 50 ಜನರನ್ನು ಗುರಿ ಮಾಡಿ ಲಸಿಕೆ ನೀಡಲಾಗುತ್ತಿದೆ. ಹಾಗೂ ನಗರದಲ್ಲಿ ಒಂದು ದಿನಕ್ಕೆ 10 ಸಾವಿರ ಜನರಿಗೆ ಲಸಿಕೆ ನೀಡುವ ಗುರಿ ಹೊಂದಿದ್ದು, 6 ಸಾವಿರ ಜನರನ್ನು ತಲುಪುತ್ತಿದ್ದೇವೆ. ಇಲ್ಲಿಯವರೆಗೂ ಒಟ್ಟು 93 ಸಾವಿರ ಜನರಿಗೆ ಕೋವಿಡ್ ವ್ಯಾಕ್ಸಿನೇಷನ್ ನೀಡಲಾಗಿದೆ. ಮುಂದಿನ ದಿನಗಳಲ್ಲಿ ಈ ಸಂಖ್ಯೆ ಹೆಚ್ಚಿಸಲು ಎಲ್ಲಾ ಇಲಾಖೆಯ ಪ್ರತಿನಿಧಿಗಳು ಸರ್ವೆ ನಡೆಸುವ ಮೂಲಕ ಶ್ರಮವಹಿಸುತ್ತಿದ್ದು, ಸಾರ್ವಜನಿಕರಲ್ಲೂ ಜಾಗೃತಿ ಮೂಡಿಸುತ್ತಿದ್ದೇವೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ತಾಲ್ಲೂಕು ಆರೋಗ್ಯಾಧಿಕಾರಿ ಡಾ.ವೆಂಕಟೇಶ್.ಎಲ್.ಡಿ, ಆರ್.ಸಿ.ಹೆಚ್ ಅಧಿಕಾರಿ ಡಾ.ಮೀನಾಕ್ಷಿ, ಡಿಎಲ್‍ಒ ಡಾ.ಮುರುಳೀಧರ್, ಡಿಎಫ್‍ಒ ಡಾ.ರೇಣುಕಾರಾಧ್ಯ, ಡಿಎಂಒ ಡಾ.ನಟರಾಜ್, ಆರೋಗ್ಯ ಶಿಕ್ಷಣಾಧಿಕಾರಿ ಸುರೇಶ್ ಬಾರ್ಕಿ, ಡಾ.ಮಂಜುಳ, ಡಾ.ವೇದಮೂರ್ತಿ, ಡಾ.ಸುನಿತ, ಡಾ.ವೆಂಕಟೇಶ್, ಡಾ.ಉಮಾಪತಿ ಸೇರಿದಂತೆ ಇತರೆ ಎಲ್ಲಾ ಆರೋಗ್ಯ ಅಧಿಕಾರಿಗಳು ಹಾಗೂ ಆಶಾ ಕಾರ್ಯಕರ್ತೆಯರು, ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳು ಭಾಗವಹಿಸಿದ್ದರು.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

  • astrology today astrology today

    ಪ್ರಮುಖ ಸುದ್ದಿ

    ಸೋಮವಾರದ ರಾಶಿ ಭವಿಷ್ಯ 04 ಆಗಸ್ಟ್ 2025

    By

    ಈ ರಾಶಿಯವರಿಗೆ ಜನ್ಮ ರಾಶಿಯಲ್ಲಿ ಶನಿ ಇದ್ದು ಅವಿವಾಹಿತರಿಗೆ ಮದುವೆ ವಿಳಂಬ, ದಂಪತಿಗಳಿಗೆ ಅತಿಯಾದ ಕಿರುಕುಳದಿಂದ ವಿಚ್ಛೇದನ, ಉದ್ಯೋಗಿಸ್ತರಿಗೆ ತೊಂದರೆ, ಸೋಮವಾರದ...

  • astrology today astrology today

    ಪ್ರಮುಖ ಸುದ್ದಿ

    ಭಾನುವಾರದ ರಾಶಿ ಭವಿಷ್ಯ 03 ಆಗಸ್ಟ್ 2025

    By

    ಈ ರಾಶಿಯವರ ಕೊನೆಗೂ ಮದುವೆಯಾಯಿತು, ಈ ರಾಶಿಯವರ ಮಕ್ಕಳ ಸಂಕಷ್ಟ ಎದುರಾದ ಬಗ್ಗೆ ಚಿಂತನೆ, ಈ ರಾಶಿಯ ಕಮಿಷನ್ ಏಜೆಂಟ್ ವ್ಯವಹಾರಸ್ತರಿಗೆ...

  • astrology today astrology today

    ಪ್ರಮುಖ ಸುದ್ದಿ

    ಶನಿವಾರದ ರಾಶಿ ಭವಿಷ್ಯ 02 ಆಗಸ್ಟ್ 2025

    By

    ಈ ರಾಶಿಯವರಿಗೆ ಎಷ್ಟೇ ಪ್ರಯತ್ನಿಸದರೂ ಮದುವೆ ಯೋಗ ಬರುತ್ತಿಲ್ಲ, ಈ ರಾಶಿಯ ಸಿರಿ ಧಾನ್ಯ ವ್ಯಾಪಾರಿಸ್ತರಿಗೆ ಲಾಭ ಇಲ್ಲ, ಶನಿವಾರದ ರಾಶಿ...

  • astrology today astrology today

    ಪ್ರಮುಖ ಸುದ್ದಿ

    ಶುಕ್ರವಾರದ ರಾಶಿ ಭವಿಷ್ಯ 01 ಆಗಸ್ಟ್ 2025

    By

    ಈ ರಾಶಿಯವರು ಯೋಚಿಸಿರುವ ಕೆಲಸದಲ್ಲಿ ಜಯ, ಈ ರಾಶಿಯವರಿಗೆ ಸರಕಾರಿ ಉದ್ಯೋಗ ಪ್ರಾಪ್ತಿ, ಶುಕ್ರವಾರದ ರಾಶಿ ಭವಿಷ್ಯ 01 ಆಗಸ್ಟ್ 2025...

  • astrology today astrology today

    ಪ್ರಮುಖ ಸುದ್ದಿ

    ಗುರುವಾರದ ರಾಶಿ ಭವಿಷ್ಯ 31 ಜುಲೈ 2025

    By

    ಈ ರಾಶಿಯವರಿಗೆ ಕುಟುಂಬ ಕಲಹಗಳಿಂದ ಮುಕ್ತಿ ಸಿಗುವುದು! ಈ ರಾಶಿಯವರು ಇಷ್ಟಪಟ್ಟವರ ಜೊತೆ ಮದುವೆ ಗ್ಯಾರಂಟಿ. ಗುರುವಾರದ ರಾಶಿ ಭವಿಷ್ಯ 31...

ದಾವಣಗೆರೆ

Advertisement
Advertisement Enter ad code here

Title

To Top