ದಾವಣಗೆರೆ: ಜಿಲ್ಲೆಯಲ್ಲಿ ಕಳೆದ 24 ಗಂಟೆಯಲ್ಲಿ 548 ಪಾಸಿಟಿವ್ ಕೇಸ್ ಗಳು ಪತ್ತೆಯಾಗಿದ್ದು, 212 ಮಂದಿ ಸೋಂಕಿನಿಂದ ಡಿಸ್ಚಾರ್ಜ್ ಆಗಿದ್ದಾರೆ. ಇಬ್ಬರು ಸೋಂಕಿನಿಂದ ಸಾವನ್ನಪ್ಪಿದ್ದಾರೆ.
ದಾವಣಗೆರೆಯಲ್ಲಿ 337 ಹರಿಹರ 56, ಜಗಳೂರು 31, ಚನ್ನಗಿರಿ 72, ಹೊನ್ನಾಳಿ 39, ಹೊರ ಜಿಲ್ಲೆಯಿಂದ 13 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಈ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 27, 7722 ಕ್ಕೆ ಏರಿಕೆಯಾಗಿದೆ. ಇದುವರೆಗೆ 24, 898 ಮಂದಿ ಡಿಸ್ಚಾರ್ಜ್ ಆಗಿದ್ದಾರೆ. ಜಿಲ್ಲೆಯಲ್ಲಿ ಒಟ್ಟು 290 ಮಂದಿ ಸಾವನ್ನಪ್ಪಿದ್ದಾರೆ. ಹರಿಹರದ ಕುಂಬಾರ ಬೀದಿಯ 70 ವರ್ಷದ ವೃದ್ಧ ಹಾಗೂ ವಿನಾಯಕ ನಗರದ 35 ವರ್ಷದ ಪುರುಷ ಸಾವನ್ನಪ್ಪಿದ್ದಾರೆ.



