ದಾವಣಗೆರೆ; ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳು, ಸರ್ಕಾರಿ ಮುಸ್ಲಿಂ ವಸತಿ ಶಾಲೆಗಳು ಹಾಗೂ ಡಾ||ಎ.ಪಿ.ಜೆಅಬ್ದುಲ್ ಕಲಾಂ ವಸತಿ ಶಾಲೆಗಳಲ್ಲಿ 6ನೇ ತರಗತಿ ಪ್ರವೇಶಕ್ಕಾಗಿ ಪರೀಕ್ಷೆ ಬರೆದು ಆಯ್ಕೆಯಾದ ಅರ್ಹ ವಿದ್ಯಾರ್ಥಿಗಳಿಗೆ ಮೇ.30 ರಂದು ಜಿಲ್ಲಾಡಳಿತ ಭವನ, ತುಂಗಭದ್ರ ಸಭಾಂಗಣದಲ್ಲಿ ಕೌನ್ಸೆಲಿಂಗ್ ನಡೆಸಲಾಗುವುದು.
ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ಬೆಳಿಗ್ಗೆ 10.00 ರಿಂದ 1.30ರವರೆಗೆ ಮತ್ತು ಇತರೆ ವಿದ್ಯಾರ್ಥಿಗಳಿಗೆ ಮಧ್ಯಾಹ್ನ 2.30 ರಿಂದ 5 ಗಂಟೆಯವರೆಗೆ ದಾಖಲಾತಿ ಪಡೆಯಲು ಕೌನ್ಸೆಲಿಂಗ್‍ಗೆ ಹಾಜರಾಗಬೇಕು. ಹೆಚ್ಚಿನ ಮಾಹಿತಿಗಾಗಿ ದೂ.ಸಂ: 08192-250022 ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಅಧಿಕಾರಿ ತಿಳಿಸಿದ್ದಾರೆ.