Connect with us

Dvgsuddi Kannada | online news portal | Kannada news online

ದಾವಣಗೆರೆ ರೈತರಿಗೆ ಉಚಿತ ಆಧುನಿಕ ಹೈನುಗಾರಿಕೆ ತರಬೇತಿ

dairy

ದಾವಣಗೆರೆ

ದಾವಣಗೆರೆ ರೈತರಿಗೆ ಉಚಿತ ಆಧುನಿಕ ಹೈನುಗಾರಿಕೆ ತರಬೇತಿ

ದಾವಣಗೆರೆ: ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ವತಿಯಿಂದ ದಾವಣಗೆರೆ ಪಿ.ಬಿ.ರಸ್ತೆಯ ಅರುಣ ಚಿತ್ರಮಂದಿರದ ಎದುರಿನ ಪಶು ಆಸ್ಪತ್ರೆ ಆವರಣದಲ್ಲಿರುವ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ಡಿ.06 ಮತ್ತು 07 ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ 2 ದಿನಗಳ ಆಧುನಿಕ ಹೈನುಗಾರಿಕೆ ತರಬೇತಿಯನ್ನು ಹಮ್ಮಿಕೊಳ್ಳಲಾಗಿದೆ.

ತರಬೇತಿ ಕಾರ್ಯಕ್ರಮಕ್ಕೆ ಯಾವುದೇ ಪ್ರೋತ್ಸಾಹಧನ ಮತ್ತು ಭತ್ಯೆ ನೀಡಲಾಗುವುದಿಲ್ಲ. ಆಸಕ್ತಿಯುಳ್ಳ ರೈತರು, ಮಹಿಳೆಯರು, ನಿರುದ್ಯೋಗ ಯುವಕ, ಯುವತಿಯರು ತರಬೇತಿ ಪಡೆಯಬಹುದು. ತರಬೇತಿಗೆ ಹಾಜರಾಗುವವರು ಆಧಾರ್ ಕಾರ್ಡ್ ಜೆರಾಕ್ಸ್, 2 ಪಾರ್ಸ್‍ಪೋರ್ಟ್ ಅಳತೆ ಫೋಟೊ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರು ಜಾತಿ ಪ್ರಮಾಣಪತ್ರದ ಜೆರಾಕ್ಸ್ ಪ್ರತಿ ತರಬೇಕು.

ಹೆಚ್ಚಿನ ಮಾಹಿತಿಗಾಗಿ ಪಶುವೈದ್ಯಕೀಯ ಸಹಾಯಕರ ತರಬೇತಿ ಕೇಂದ್ರ ದೂ.ಸಂ:08192-233787 ಅನ್ನು ಸಂಪರ್ಕಿಸಬಹುದೆಂದು ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದ ಮುಖ್ಯ ಪಶುವೈದ್ಯಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top