Connect with us

Dvgsuddi Kannada | online news portal | Kannada news online

ದಾವಣಗೆರೆ: ಕ್ರಿಕೆಟ್ ಹಬ್ಬಕ್ಕೆ ಶಾಮನೂರು ಶಿವಶಂಕರಪ್ಪ ಚಾಲನೆ

ದಾವಣಗೆರೆ

ದಾವಣಗೆರೆ: ಕ್ರಿಕೆಟ್ ಹಬ್ಬಕ್ಕೆ ಶಾಮನೂರು ಶಿವಶಂಕರಪ್ಪ ಚಾಲನೆ

ದಾವಣಗೆರೆ: ರಾಷ್ಟ್ರ ಮಟ್ಟದ ಹೊನಲು ಬೆಳಕಿನ ಶಾಮನೂರು ಡೈಮಂಡ್ ಹಾಗೂ ಶಿವಗಂಗಾ ಕಪ್ 2021 ಕ್ರಿಕೆಟ್ ಟೂರ್ನಿಗೆ ಶಾಸಕ ಶಾಮನೂರು ಶಿವಶಂಕರಪ್ಪ ಚಾಲನೆ ನೀಡಿದರು.

 

ದಿ.ಪಾರ್ವತಮ್ಮ ಶಾಮನೂರು ಶಿವಶಂಕರಪ್ಪ ಅವರ ಸವಿನೆನಪಿಗಾಗಿ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ನ. 25 ರಿಂದ 28ರವರೆಗೆ ಜಿಲ್ಲಾ ಕ್ರೀಡಾಪಟುಗಳ ಸಾಂಸ್ಕೃತಿಕ ಸಂಘ ಹಾಗೂ ದಾವಣಗೆರೆ ಇಲೆವೆನ್ಸ್ ಕ್ರಿಕೆಟ್ ಕ್ಲಬ್ ವತಿಯಿಂದ ಹಮ್ಮಿಕೊಳ್ಳಲಾಗಿದೆ. ಅಧ್ಯಕ್ಷತೆಯನ್ನು ದಿನೇಶ್ ಕೆ.ಶೆಟ್ಟಿ ವಹಿಸಿದ್ದರು. ಅತಿಥಿಗಳಾಗಿ ಉದ್ಯಮಿಗಳಾದ ಅಥಣಿ ವೀರಣ್ಣ, ಮಹಾದೇವ್, ಶಿವಗಂಗಾ ಶ್ರೀನಿವಾಸ್, ರಮೇಶ್ ಬಾಬು, ವಿಜಯಕುಮಾರ್, ಅಯೂಬ್ ಪೈಲ್ವಾನ್, ಚಾಮುಂಡಿ ಕುಮಾರ್, ಸುರೇಶ್, ಶೌಕತ್, ರಂಗಸ್ವಾಮಿ ಮತ್ತಿತರರು ಉಪಸ್ಥಿತರಿದ್ದರು. ಕುರುಡಿ ಗಿರೀಶ್ ಮತ್ತು ಜಯಪ್ರಕಾಶ್ ಗೌಡ ಎಲ್ಲರನ್ನೂ ಸ್ವಾಗತಿಸಿದರು. ಇದೇ ವೇಳೆ ಕ್ರೀಡಾ ಪ್ರೋತ್ಸಾಹಕರನ್ನು ಸನ್ಮಾನಿಸಲಾಯಿತು.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top