ದಾವಣಗೆರೆ: ಜಿಲ್ಲೆಯ ಚನ್ನಗಿರಿ ತಾಲ್ಲೂಕಿನ ಗುರುರಾಜಪುರ ಗ್ರಾಮದ ಬಸ್ ನಿಲ್ದಾಣ ಬಳಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ 5 ಲಕ್ಷ ಮೌಲ್ಯದ ಶ್ರೀ ಗಂಧದ ತುಂಡುಗಳನ್ನು ಅರುಣ್ಯ ಇಲಾಖೆಯ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ಚನ್ನಗಿರಿಯ ಕೆಂಪಯ್ಯನ ತೊಕ್ಕಲು ಗ್ರಾಮದ ನಿವಾಸಿಯಾದ ಮುನಿಯಪ್ಪ ಹಾಗೂ ರಾಧಾಕೃಷ್ಣ ಎಂಬ ಆರೋಪಿಗಳನ್ನು ಬಂಧಿಸಲಾಗಿದೆ. ಇಬ್ಬರು ಶಿವಮೊಗ್ಗ-ಚಿತ್ರದುರ್ಗ ಮಾರ್ಗದಲ್ಲಿ 58 ಕೆಜಿ ತೂಕದ ಗಂಧದ ತುಂಡುಗಳನ್ನು ಅಕ್ರಮವಾಗಿ ಡಿಸ್ಕವರಿ ಬೈಕ್ ನಲ್ಲಿ ಸಾಗಾಟ ಮಾಡುತ್ತಿದ್ದರು. ದಾಳಿ ವೇಳೆ 5 ಲಕ್ಷ ಮೌಲ್ಯದ ಶ್ರೀಗಂಧದ ತುಂಡು ಹಾಗೂ ಒಂಡು ಬೈಕ್ ಅನ್ನು ವಶಕ್ಕೆ ಪಡೆಯಲಾಗಿದೆ.



