ದಾವಣಗೆರೆ: ಸರ್ಕಾರಿ ಆಸ್ಪತ್ರೆ ವೈದ್ಯರೊಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ದಾವಣಗೆರೆಯ ಎಸ್.ಎಸ್. ಆಸ್ಪತ್ರೆಯ ರಸ್ತೆ ಬದಿ ನಡೆದಿದೆ.ಜಿಲ್ಲೆಯ ಮಾಯಕೊಂಡ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯ ಡಾ.ಜಿ.ಆರ್. ಗೋವಿಂದರಾಜ್ (53) ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡವರು. ಆತ್ಮಹತ್ಯೆಗೆ ಸ್ಪಷ್ಟ ಕಾರಣ ತಿಳಿದಿಲ್ಲ.
ಗೋವಿಂದರಾಜ್ ಕಳೆದ ಏಳು ವರ್ಷದಿಂದ ಮಾಯಕೊಂಡ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯರಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಮೃತರು ಪತ್ನಿ, ಇಬ್ಬರು ಗಂಡು ಮಕ್ಕಳಿದ್ದಾರೆ. ಮೂಲತಃ ಮಾಯಕೊಂಡ ಗ್ರಾಮದದವರು. ದಾವಣಗೆರೆಯಲ್ಲಿ ವಾಸವಾಗಿದ್ದರು. ಮಂಗಳವಾರ ದಾವಣಗೆರೆ ಸಭೆಯಲ್ಲಿ ಭಾಗವಹಿಸಿದ್ದರು. ಬುಧವಾರ ಕರ್ತವ್ಯಕ್ಕೆ ಹಾಜರಾಗಿರಲಿಲ್ಲ. ಈ ಬಗ್ಗೆ ದಾವಣಗೆರೆ ಕೆಟಿಜೆ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



