ದಾವಣಗೆರೆ: ಶಾಮನೂರು ಸೇತುವೆ ಬಳಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ 3.42 ಲಕ್ಷ ಮೌಲ್ಯದ 22.50 ಕ್ವಿಂಟಾಲ್ ಅಕ್ಕಿಯನ್ನು ಹಾಗೂ ಒಂದು ಲಾರಿಯನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ರಾಷ್ಟ್ರೀಯ ಹೆದ್ದಾರಿಯಲ್ಲಿ ಅಕ್ರಮವಾಗಿ ಪಡಿತರ ಅಕ್ಕಿಯನ್ನು ಸಾಗಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ವಿದ್ಯಾನಗರ ಪಿಎಸ್ಐ ಪ್ರಸಾದ್ , ಶಬಿನಾ ಪರ್ವೀನ್, ಆಹಾರ ನಿರೀಕ್ಷಕರು, ದಾವಣಗೆರೆ ಮತ್ತು ಸಿಬ್ಬಂದಿಗಳನ್ನೊಳಗೊಂಡ ತಂಡ ದಾಳಿ ಮಾಡಿದೆ. ಈ ಸಂಬಂಧ ವಿದ್ಯಾನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



