ದಾವಣಗೆರೆ: ಊಟಕ್ಕೆ ಚಿಕನ್ ಮಾಡಿಲ್ಲವೆಂದು ಪತ್ನಿಯನ್ನೇ ಚಾಕುವಿನಿಂದ ಇರಿದು ಕೊಲೆ ಮಾಡಿದ ಪತಿ ಪೋಲೀಸರು ಬಂಧಿಸಿದ್ದಾರೆ.
ಜಿಲ್ಲೆಯ ಹರಿಹರ ತಾಲ್ಲೂಕಿನ ಬನ್ನಿಕೋಡು ಗ್ರಾಮದಲ್ಲಿ ಈ ಘಟಬೆ ನಡೆದಿತ್ತು. ಶೀಲಾ ಕೊಲೆಯಾದ ಮಹಿಳೆ. ಬನ್ನಿಕೋಡು ಗ್ರಾಮದ ರೋಡ್ ರೋಲರ್ ಅಪರೇಟರ್ ಆಗಿದ್ದ ಕೆಂಚಪ್ಪ, 9 ವರ್ಷಗಳ ಹಿಂದೆ ಈಕೆಯ ಮದುವೆಯಾಗಿತ್ತು. ಹರಿಹರ ತಾಲೂಕಿನ ವಾಸನ ಗ್ರಾಮದ ಶೀಲಾಳನ್ನು ಕೆಂಚಪ್ಪ ಪ್ರೀತಿಸಿದ್ದು, ಮನೆಯವರು ವಿರೋಧ ವ್ಯಕ್ತಪಡಿಸಿದ ಹಿನ್ನಲೆ ಮನೆಯಿಂದ ಓಡಿ ಬಂದು ದೇವಸ್ಥಾನದಲ್ಲಿ ಮದುವೆಯಾಗಿದ್ದರು, ಹೇಗೋ ಸುಖವಾಗಿ ಸಂಸಾರ ಮಾಡಿ ಒಂದು ಮುದ್ದಾದ ಮಗುವನ್ನು ಪಡೆದಿದ್ದರು.ಆಗ ಕೆಂಚಪ್ಪನ ಅಸಲಿ ಸತ್ಯ ಗೊತ್ತಾಗಿದೆ ಕೆಂಚಪ್ಪನಿಗೆ ಈಗಾಗಲೇ ಮದುವೆ ಯಾಗಿದ್ದು , ಆಕೆಗೆ ಮಕ್ಕಳಿಲ್ಲ ಎನ್ನುವ ಕಾರಣಕ್ಕೆ ತನ್ನನ್ನು ಮದುವೆಯಾಗಿರುವುದು ಗೊತ್ತಾಗಿದೆ. ಈ ಪ್ರತಿನಿತ್ಯ ಜಗಳ ನಡೆಯುತ್ತಿತ್ತು.
ಕೆಂಚಪ್ಪ ಕೂಡ ಮದ್ಯ ಸೇವನೆ ಮಾಡಿ ರಾದ್ದಾಂತ ಮಾಡುತ್ತಿದ್ದ, ಇದು ಎರಡು ಮನೆಯವರಿಗೆ ಗೊತ್ತಾಗಿ ರಾಜೀ ಪಂಚಾಯತಿ ಮಾಡಿ ಹೋಗಿದ್ದರು. ಆದರೆ, ಮದ್ಯ ಸೇವನೆ ಮಾಡಿ ಬಂದ ಕೆಂಚಪ್ಪ ಹೆಂಡತಿಗೆ ಚಿಕನ್ ಅಡುಗೆ ಮಾಡಿಲ್ಲ ಎಂದು ಜಗಳವಾಡಿ ಕೊನೆಗೆ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ. ಹರಿಹರ ಗ್ರಾಮಾಂತರ ಠಾಣೆಯಲ್ಲಿ ದಾಖಲಾಗಿತ್ತು. ಇದೀಗ ಪತಿ ಕೆಂಚಪ್ಪನನ್ನು ಪೊಲೀಸರು ಬಂಧಿಸಿದ್ದಾರೆ.