ದಾವಣಗೆರೆ: ಕಾಂಗ್ರೆಸ್ ಮುಖಂಡ ಜೈನುಲ್ಲಾ ಖಾನ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ನಿನ್ನೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಬಸವಾ ಪಟ್ಟಣ ಗುಡ್ಡದಲ್ಲಿ ಕಾಂಗ್ರೆಸ್ ಮುಖಂಡ ಶವ ಪತ್ತೆಯಾಗಿತ್ತು. ಪ್ರಕರಣ ಸಬಂಧ ಬಸವಾಪಟ್ಟಣ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.
ಅಮ್ಜದ್ ಖಾನ್ (44), ಇಸ್ಮಾಯಿಲ್ ಖಾನ್ (42) ನೂರ್ ಅಹ್ಮದ್ (36) ಬಂಧಿತ ಆರೋಪಿಗಳು. ಸೆಪ್ಟೆಂಬರ್ ಎರಡರಂದು ಕಾಂಗ್ರೆಸ್ ಮುಖಂಡ ಜೈನುಲ್ಲಾ ಖಾನ್ ನಾಪತ್ತೆಯಾಗಿದ್ದರು. ಕೊಲೆ ಶಂಕೆ ವ್ತಕ್ತವಾಗಿತ್ತು. ನಿನ್ನೆ (ಸೆ.10) ಬೆಳಕಿಗೆ ಶವ ಪತ್ತೆಯಾಗಿತ್ತು. ಇದೀಗ ಕೊಲೆಯ ಆರೋಪಮ ಮೇಲೆ ಮೂವರನ್ನು ಬಂಧಿಸಲಾಗಿದೆ.
ಆರೋಪಿಗಳು ಕಾಂಗ್ರೆಸ್ ಮುಖಂಡನನ್ನು ಬಸವಾ ಪಟ್ಟಣ ಗುಡ್ಡದಲ್ಲಿ ಉಸಿರುಗಟ್ಟಿಸಿ ಕೊಲೆ ಮಾಡಿ, ಹೂತು ಹಾಕಿದ್ದರು. ಕೊಲೆಯಾದ ಕೈ ಮುಖಂಡ ಜೈನುಲ್ಲಾ ಖಾನ್ ಆರೋಪಿ ಅಮ್ಜದ್ ಖಾನ್ ಪತ್ನಿ ಜೊತೆ ಅನೈತಿಕ ಸಂಬಂಧ ಹೊಂದಿದ್ದ, ಈ ವಿಷಯ ಆರೋಪಿ ಅಮ್ಜದ್ ಖಾನ್ ಗಮನಕ್ಕೆ ಬಂದಿತ್ತು. ಸ್ನೇಹಿಯತರ ಜೊತೆ ಸೇರಿ ಜೈನುಲ್ಲಾ ಖಾನ್ ನನ್ನು ಕೊಲೆ ಮಾಡಿರುವುದಾಗಿ ಆರೋಪಿಗಳು ತಿಳಿಸಿದ್ಧಾರೆ.
ಮೃತ ಜೈನುಲ್ಲಾ ಖಾನ್ ಬೆಸ್ಕಾಂ ಗುತ್ತಿಗೆದಾರನಾಗಿದ್ದು, ಮಾಯಕೊಂಡ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಲ್ಪ ಸಂಖ್ಯಾತರ ಘಟಕದ ಉಪಾಧ್ಯಕ್ಷರಾಗಿದ್ದರು. ಅಪಹರಿಸಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿತ್ತು. ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿಬಿ ರಿಷ್ಯಂತ್ ಭೇಟಿ ನೀಡಿ ಪರಶೀಲನೆ ನಡೆಸಿದ್ದರು. ಬಸವಾಪಟ್ಟಣದ ಪೊಲೀಸರು ಆರೋಪಿಗಳನ್ನು ನ್ಯಾಯಾಲಕ್ಕೆ ಹಾಜರುಪಡಿಸಿದ್ದಾರೆ.