ದಾವಣಗೆರೆ: ಪ್ರತ್ಯೇಕ ಮೂರು ಪ್ರಕರಣಕ್ಕೆ ಸಬಂಧಿಸಿದಂತೆ ಒರ್ವ ಖತರ್ನಾಕ್ ಕಳ್ಳನನ್ನು ಜಿಲ್ಲಾ ಪೊಲೀಸರು ಬಂಧಿಸಿದ್ದು, ಆರೋಪಿಯಿಂದ 6.70 ಲಕ್ಷ ಮೌಲ್ಯದ 150 ಗ್ರಾಂ ಚಿನ್ನ ವಶಕ್ಕೆ ಪಡೆಯಲಾಗಿದೆ.
ನಗರದ ಬಡಾವಣೆ, ಬಸವನಗರ ಹಾಗೂ ಗಾಂಧಿನಗರ ಪೊಲೀಸ್ ಠಾಣೆಯ ಪ್ರತ್ಯೇಕ ಪ್ರಕರಣದಲ್ಲಿ ಒಬ್ಬ ಆರೋಪಿಯನ್ನು ಬಂಧಿಸಿದ್ದು, ಬಂಧಿತನಿಂದ 8 ಸಾವಿರ ನಗದು ಹಾಗೂ 6.70 ಲಕ್ಷ ಮೌಲ್ಯದ ಚಿನ್ನಾಭರಣ ವಶಪಡಿಸಿಕೊಳ್ಳಲಾಗಿದೆ. ಡಿವೈಎಸ್ ಪಿ ನರಸಿಂಹ ವಿ ತಾಮ್ರಧ್ವಜ ಅವರ ಮಾರ್ಗ ದರ್ಶನದಲ್ಲಿ ವೃತ್ತ ನಿರೀಕ್ಷಕ ಧನಂಜಯ ನೇತೃತ್ವದಲ್ಲಿ ಬಡಾವಣೆ ಪೊಲೀಸ್ ಠಾಣೆಯ ಪಿಎಸ್ ಐ ಅಶ್ವಥಕುಮಾರ ಮತ್ತು ಸಿಬ್ಬಂದಿ ಒಳಗೊಂಡ ತಂಡ ಆರೋಪಿಯನ್ನು ಬಂಧಿಸಿದೆ.



