ದಾವಣಗೆರೆ: ಜಿಲ್ಲೆಯ ಹೊನ್ನಾಳಿ ತಾಲ್ಲೂಕಿನ ಹೊಳೆಮಾದಾಪುರ ಗ್ರಾಮದ ಬಳಿ ಅಕ್ರಮವಾಗಿ ಸಂಗ್ರಹಿಸಿದ 10 ಟ್ರ್ಯಾಕ್ಟರ್ ಲೋಡ್ ಮರಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಯಾವುದೇ ಅನುಮತಿ ಪಡೆಯದೆ ತುಂಗಭದ್ರಾ ನದಿಯಿಂದ ಅಕ್ರಮವಾಗಿ ಮರಳು ಸಂಗ್ರಹಿಸಲಾಗಿತ್ತು. ಈ ಬಗ್ಗೆ ಖಚಿತ ಮಾಹಿತಿ ಮೇರೆಗೆ ಹೊನ್ನಾಳಿ ಪೊಲೀಸರು ದಾಳಿ ನಡೆಸಿ, ಅಕ್ರಮವಾಗಿ ಸಂಗ್ರಹಿಸಿದ ಮರಳು ವಶಕ್ಕೆ ಪಡೆದಿದ್ದಾರೆ. ಡಿವೈಎಸ್ ಪಿ ಕೆ.ಎಂ ಸಂತೋಷ್, ಸಿಪಿಐ ದೇವರಾಜ್ ಮಾರ್ಗದರ್ಶನದಲ್ಲಿ ಪಿಎಸ್ ಐ ಬಸವರಾಜ ಬಿರದಾರ್ ಹಾಗೂ ಸಿಬ್ಬಂದಿಗಳನ್ನೊಳಗೊಂಡ ತಂಡ ದಾಳಿ ನಡೆಸಿದೆ.



