ದಾವಣಗೆರೆ: ಅಕ್ರಮವಾಗಿ ಮನೆ ಹಿಂಭಾಗದ ಹಿತ್ತಲಲ್ಲಿ ಗಾಂಜಾ ಗಿಡ ಬೆಳೆದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಚನ್ನಗಿರಿ ತಾಲ್ಲೂಕಿನ ಹಿರೇಕೋಗಲೂರು ಗ್ರಾಮದ ಮನೆಯೊಂದರಲ್ಲಿ ಮಾರಾಟ ಮಾಡುವ ಉದ್ದೇಶದಿಂದ ಗಾಂಜಾ ಬೆಳೆಯಲಾಗಿದೆ ಎಂಬ ಖಚಿತ ಮಾಹಿತಿ ಮೇರೆಗೆ ತಾಲ್ಲೂಕು ದಂಡಾಧಿಕಾರಿ ನೇತೃತ್ವದಲ್ಲಿ ದಾಳಿ ಮಾಡಿ, ಆರೋಪಿಯನ್ನು ಬಂಧಿಸಲಾಗಿದೆ. ಬಂಧಿತನಿಂದ 2 ಕೆ.ಜಿ. 900 ಗ್ರಾಂ ಗಾಂಜಾ ವಶಪಡಿಸಿಕೊಳ್ಳಲಾಗಿದೆ.
ಡಿವೈಎಸ್ ಪಿ ಸಂತೋಷ ಮಾರ್ಗದರ್ಶನದಲ್ಲಿ ವೃತ್ತ ನಿರೀಕ್ಷಕ ಮಹೇಶ್ , ಪಿಎಸ್ ಐ ಶಿವರುದ್ರಪ್ಪ ಎಸ್ ಮೇಟಿ ಹಾಗೂ ಸಿಬ್ಬಂದಿ ಒಳಗೊಂಡ ತಂಡ ದಾಳಿಯಲ್ಲಿ ಭಾಗವಹಿಸಿದ್ದರು.

 
		 
		 
		 
		 
		 
			
 
                                
                             
