ದಾವಣಗೆರೆ: ಹರಿಹರ ನಗರದಲ್ಲಿ ಅಕ್ರಮ ಗಾಂಜಾ ಮಾರಾಟ ಮಾಡುತಗತಿದ್ದ ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿದ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.
ದಾವಣಗೆರೆ ಗ್ರಾಮಾಂತರ ಪೊಲೀಸ್ ಠಾಣೆ ಡಿವೈಎಸ್ ಪಿ ಕನಿಕಾ ಸಕ್ರಿವಾಲ್ ನೇತೃತ್ವದಲ್ಲಿ ಹರಿಹದ ಗೌಸಿಯಾ ಕಾಲೋನಿಯಲ್ಲಿ ದಾಳಿ ಮಾಡಲಾಗಿದೆ. ದಾಳಿಯಲ್ಲಿ ಮೂರು ಜನ ಆರೋಪಿಗಳು ಹಾಗೂ 630 ಗ್ರಾಂ ಗಾಂಜಾ, ಮೂರು ಮೊಬೈಲ್ ಹಾಗೂ ಎರಡು ಬೈಕ್ ಗಳನ್ನು ವಶಪಡಿಸಿಕೊಳ್ಳಲಾಗಿದೆ. ಹರಿಹರ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



