ದಾವಣಗೆರೆ: ರೈತರ ಟ್ರ್ಯಾಕ್ಟರ್, ಕೃಷಿ ಯಂತ್ರೋಪಕರಣ ಕಳ್ಳತನ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಚನ್ನಗಿರಿ ಪೊಲೀಸರು ಬಂಧನ ಮಾಡಿದ್ದಾರೆ. ಬಂಧಿತ ಆರೋಪಿಗಳಿಂದ 7.20 ಲಕ್ಷ ಮೌಲ್ಯದ ಟ್ರ್ಯಾಕ್ಟರ್, ಟ್ರಾಲಿ ಮತ್ತು ಕೃಷಿ ಯಂತ್ರೋಪಕರಣಗಳನ್ನು ವಶಕ್ಕೆ ಪಡೆಯಲಾಗಿದೆ.
ಸಂತೇಬೆನ್ನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಗಳ ಪತ್ತೆಗಾಗಿ ಬಲೆ ಬೀಸಿದ್ದರು. ಡಿವೈಎಸ್ ಪಿ ಡಾ. ಸಂತೋಷ್ ಮಾರ್ಗದರ್ಶನದಲ್ಲಿ ವೃತ್ತದ ಸಿಪಿಐ ಮಹೇಶ್ ನೇತೃತ್ವದಲ್ಲಿ ಪಿಎಸ್ ಐ ರುದ್ರಪ್ಪ ಎಸ್ ಮೇಟಿ ಅವರನ್ನೊಳಗೊಂಡ ತಂಡ ದಾಳಿ ಮಾಡಿ ಆರೋಪಿಗಳನ್ನು ಬಂಧಿಸಿದ್ದಾರೆ.



