Connect with us

Dvgsuddi Kannada | online news portal | Kannada news online

ದಾವಣಗೆರೆ: ರೈತರ ಟ್ರ್ಯಾಕ್ಟರ್, ಕೃಷಿ ಯಂತ್ರೋಪಕರಣ ಕಳ್ಳತನ ಮಾಡುತ್ತಿದ್ದ ಮೂವರು ಆರೋಪಿಗಳ ಬಂಧನ

ಚನ್ನಗಿರಿ

ದಾವಣಗೆರೆ: ರೈತರ ಟ್ರ್ಯಾಕ್ಟರ್, ಕೃಷಿ ಯಂತ್ರೋಪಕರಣ ಕಳ್ಳತನ ಮಾಡುತ್ತಿದ್ದ ಮೂವರು ಆರೋಪಿಗಳ ಬಂಧನ

ದಾವಣಗೆರೆ: ರೈತರ ಟ್ರ್ಯಾಕ್ಟರ್, ಕೃಷಿ ಯಂತ್ರೋಪಕರಣ ಕಳ್ಳತನ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಚನ್ನಗಿರಿ ಪೊಲೀಸರು ಬಂಧನ ಮಾಡಿದ್ದಾರೆ. ಬಂಧಿತ ಆರೋಪಿಗಳಿಂದ 7.20 ಲಕ್ಷ ಮೌಲ್ಯದ ಟ್ರ್ಯಾಕ್ಟರ್, ಟ್ರಾಲಿ ಮತ್ತು ಕೃಷಿ ಯಂತ್ರೋಪಕರಣಗಳನ್ನು ವಶಕ್ಕೆ ಪಡೆಯಲಾಗಿದೆ.

ಸಂತೇಬೆನ್ನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಗಳ ಪತ್ತೆಗಾಗಿ ಬಲೆ‌‌ ಬೀಸಿದ್ದರು. ಡಿವೈಎಸ್ ಪಿ ಡಾ. ಸಂತೋಷ್ ಮಾರ್ಗದರ್ಶನದಲ್ಲಿ ವೃತ್ತದ ಸಿಪಿಐ ಮಹೇಶ್ ನೇತೃತ್ವದಲ್ಲಿ ಪಿಎಸ್ ಐ ರುದ್ರಪ್ಪ‌ ಎಸ್ ಮೇಟಿ ಅವರನ್ನೊಳಗೊಂಡ ತಂಡ ದಾಳಿ ಮಾಡಿ ಆರೋಪಿಗಳನ್ನು ಬಂಧಿಸಿದ್ದಾರೆ.

 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಚನ್ನಗಿರಿ

To Top