ದಾವಣಗೆರೆ: ಜಿಲ್ಲಾ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಬಡಾವಣೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕಳ್ಳತನವಾಗಿದ್ದ 20 ಲಕ್ಷ ಮೌಲ್ಯದ ಬೆಳ್ಳಿ ಕಾಲ್ ಚೈನ್ ಗಳನ್ನು ವಶಕ್ಕೆ ಪಡೆದಿದ್ದಾರೆ. ಈ ಸಬಂಧ ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಬಡಾವಣೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣ ಸಂಬಂಧ ಎಸ್ ಪಿ ಸಿಬಿ ರಿಷ್ಯಂತ್ , ಹೆಚ್ಚುವರಿ ಎಸ್ ಪಿ ರಾಮಗೊಂಡ ಬಿ. ಬಸರಗಿ, ಡಿವೈಎಸ್ ಪಿ ನರಸಿಂಹ ತಾಮ್ರಧ್ವಜ ಮಾರ್ಗದರ್ಶನದಲ್ಲಿ ಬಡಾವಣೆ ಪೊಲೀಸ್ ಠಾಣೆಯ ನಿರೀಕ್ಷಕ ಧನಂಜಯ ನೇತೃತ್ವದಲ್ಲಿ ಪಿಎಸ್ ಐ ಅಶ್ವಥಕುಮಾರ ಹಾಗೂ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದರು . ಈ ಪ್ರಕಣದಲ್ಲಿ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ. ಈ ಪ್ರಕರಣ ಪತ್ತೆಯಲ್ಲಿ ಯಶಸ್ವಿಯಾದ ಪೊಲೀಸ್ ಸಿಬ್ಬಂದಿಯನ್ನು ಎಸ್ ಪಿ ರಿಷ್ಯಂತ್ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.