ದಾವಣಗೆರೆ: ಬಸವನಗರ ಪೊಲೀಸ್ ಠಾಣಾ ವ್ಯಾಪ್ತಿಯ ವಿಜಯ ಲಕ್ಷ್ಮೀ ರಸ್ತೆಯಲ್ಲಿ ಸರಗಳ್ಳತನದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಬಸವನಗರ ಪೊಲೀಸ್ ಠಾಣೆಯ ನಿರೀಕ್ಷಕರು ಗಸ್ತಿನಲ್ಲಿದ್ದಾಗ ಅನುಮಾನಸ್ಪದವಾಗಿ ಓಡಾಡುತ್ತಿದ್ದ ಆರೋಪಿಯನ್ನು ಹಿಡಿದು ವಿಚಾರಣೆ ನಡೆಸಿದ್ದಾಗ , ಚನ್ನಗಿರಿಯ ಸಂತೇಬೆನ್ನೂರು ರಸ್ತೆಯ ಬಸವೇಶ್ವರ ಪೆಟ್ರೋಲ್ ಬಂಕ್ ಬಳಿ ಒಬ್ಬ ವ್ಯಕ್ತಿಯಿಂದ ಕೊರಳಿನಿಂದ ಚಿನ್ನದ ಸರ ಕಿತ್ತುಕೊಂಡು ಬಂದು ಮಾರಾಟ ಮಾಡಲು ಬಂದಿರುವುದಾಗಿ ತಿಳಿಸಿದ್ದಾನೆ.
ಆರೋಪಿಯಿಂದ 90 ಸಾವಿರ ಮೌಲ್ಯದ 20 ಗ್ರಾಂ ಚಿನ್ನದ ಸರವನ್ನು ವಶಕ್ಕೆ ಪಡೆದು ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಈ ಪ್ರಕರಣದಲ್ಲಿ ಡಿವೈಎಸ್ ಪಿ ನರಸಿಂಹ ತಾಮ್ರಧ್ವಜ ಅವರ ಮಾರ್ಗದರ್ಶನದಲ್ಲಿ ಪೊಲೀಸ್ ನಿರೀಕ್ಷಕ ನಾಗಪ್ಪ ಬಂಕಾಳಿ ಮತ್ತು ಸಿಬ್ಬಂದಿಗಳು ಆರೋಪಿಯನ್ನು ಬಂಧಿಸಿದ್ದಾರೆ.