ದಾವಣಗೆರೆ: ವರದಕ್ಷಿಣೆ ಕಿರುಕುಳಕ್ಕೆ ಮದುವೆಯಾದ ಮೂರು ತಿಂಗಳಲ್ಲಿ ಗೃಹಿಣಿಯೊಬ್ಬರು ವಿಷ ಸೇವಿಸಿ ಸಾವನ್ನಪ್ಪಿದ ಘಟನೆ ಜಿಲ್ಲೆಯ ಚನ್ನಗಿರಿ ತಾಲ್ಲೂಕಿನ ಮೀಯಾಪುರ ತಾಂಡದಲ್ಲಿ ನಡೆದಿದೆ.
ವಿಷ ಸೇವಿಸಿದ ರೂಪಾಬಾಯಿ (22) ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಮೂರು ತಿಂಗಳ ಹಿಂದೆ ಮೀಯಾಪುರ ತಂಡದ ಗಂಗಾಧರ್ ಎಂಬುವರನ್ನು ರೂಪಾಬಾಯಿ ಮದುವೆಯಾಗಿದ್ದರು.
ರೂಪಾಬಾಯಿ ಮನೆಯವರು ಕೂಡ ಚಿನ್ನಾಭರಣ ಕೊಟ್ಟು ಅದ್ಧೂರಿಯಾಗಿ ಮದುವೆ ಮಾಡಿಕೊಟ್ಟಿದ್ದರು. ಆದರೆ, ಪತಿ ಗಂಗಾಧರ್ ಮೂರು ತೊಲ ಬಂಗಾರ ಕಡಿಮೆ ಕೊಟ್ಟಿದ್ದಾರೆ ಎಂದು ನಿತ್ಯ ಕಿರುಕುಳ ನೀಡುತ್ತಿದ್ದ, ಒಂದೂವರೆ ತಿಂಗಳ ಗರ್ಭಿಣಿ ಆಗಿದ್ದ ನಮ್ಮ ಮಗಳಿಗೆ ಗಂಡನ ಮನೆಯವರು ಕಿರುಕುಳ ನೀಡಿ ವಿಷ ಕುಡಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆಸ್ಪತ್ರೆ ದಾಖಲಿಸಿ ಎರಡು ದಿನದ ನಂತರ ನಮಗೆ ವಿಷಯ ತಿಳಿಸಿದ್ದಾರೆ ಎಂದು ರೂಪಾಬಾಯಿ ಪೋಷಕರು ಪೊಲೀಸ್ ಠಾಣೆಯಲ್ಲಿದೂರು ದಾಖಲಿಸಿದ್ದಾರೆ. ಸಂತೇಬೆನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



