ದಾವಣಗೆರೆ: ನಗರದ ಕುಂದುವಾಡ ರಸ್ತೆಯ ಮಹಾಲಕ್ಷ್ಮೀ ಬಡಾವಣೆಯಲ್ಲಿ ವ್ಯಕ್ತಿಯೊಬ್ಬರಿಗೆ ಚಾಕು ತೋರಿಸಿ ಕೈಯಲ್ಲಿದ್ದು ಉಂಗುರ ಹಾಗೂ ಕೊರಳಲ್ಲಿದ್ದ ಬಂಗಾರದ ಚೈನ್ ಕಸಿದು ಪರಾರಿಯಾದ ಘಟನೆ ನಡೆದಿದೆ.
ಶಿವಪ್ರಕಾಶ್ (61) ಚಿನ್ನಾಭರಣ ಕಳೆದುಕೊಂಡವರಾಗಿದ್ದಾರೆ. ಬೆಳಗ್ಗೆ ವಾಯು ವಿಹಾರಕ್ಕೆ ಹೋಗಿದ್ದ ಸಂದರ್ಭದಲ್ಲಿ ಬೈಕ್ ನಲ್ಲಿ ಬಂದ ದುಷ್ಕರ್ಮಿಗಳು ಈ ಕೃತ್ಯ ಎಸಗಿದ್ದಾರೆ. ದಾರಿಯಲ್ಲಿ ಹೋಗುತ್ತಿದ್ದ ಶಿವಪ್ರಕಾಶ್ ತಡೆದು, ಅಂಟಿಯರಿಗೆ ಫೋನ್ ಮಾಡ್ತೀಯಾ ಎಂದು ಬೆದರಿಕೆ ಹಾಕಿದ್ದಾರೆ. ಆಗ ಶಿವಪ್ರಕಾಶ್ ನಾನು ಯಾರಿಗೂ ಫೋನ್ ಮಾಡಿಲ್ಲ ಎಂದರೂ ಚಾಕು ತೋರಿಸಿ 75 ಸಾವಿರ ಮೌಲ್ಯದ ಚಿನ್ನದ ಸರ, ಉಂಗುರ ಕಿತ್ತುಕೊಂಡು ಪರಾರಿಯಾಗಿದ್ದಾರೆ. ಈ ಬಗ್ಗೆ ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



