Connect with us

Dvgsuddi Kannada | online news portal | Kannada news online

ದಾವಣಗೆರೆ: ಚಿರತೆ ದಾಳಿಗೆ ಮಹಿಳೆ ಬಲಿ

ದಾವಣಗೆರೆ

ದಾವಣಗೆರೆ: ಚಿರತೆ ದಾಳಿಗೆ ಮಹಿಳೆ ಬಲಿ

ದಾವಣಗೆರೆ: ಚಿರತೆ ದಾಳಿಗೆ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ನ್ಯಾಮತಿ ತಾಲೂಕಿನ ಫಲವನಹಳ್ಳಿ ಗ್ರಾಮದಲ್ಲಿ ನಡೆದಿದೆ.

ಮೃತ ಮಹಿಳೆಯನ್ನು 55 ವರ್ಷದ ಕಮಲಾಬಾಯಿ ಜೀಕಾನಾಯ್ಕ ಎಂದು ಗುರುತಿಸಲಾಗಿದೆ. ನಿನ್ನೆ ಮಧ್ಯಾಹ್ನ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದಾಗ ಚಿರತೆ ಕಮಲಾಬಾಯಿ ಅವರ ಕುತ್ತಿಗೆಗೆ ಬಾಯಿ ಹಾಕಿ ಎಳೆದುಕೊಂಡು ಹೋಗಿದೆ.ಇದನ್ನು ನೋಡಿದ ಇತರ ಮಹಿಳೆಯರು ಕಿರುಚಾಡಿದ್ದಾರೆ.

ನಂತರ ಚಿರತೆ ಕಮಲಾಬಾಯಿಯನ್ನು ಬಿಟ್ಟು ಓಡಿ ಹೋಗಿದೆ. ತೀವ್ರ ರಕ್ತಸ್ರಾವದಿಂದಾಗಿ ಅವರು ಅಲ್ಲದೆ ಮೃತಪಟ್ಟಿದ್ದಾರೆ. ಅರಣ್ಯ ಇಲಾಖೆಯ ಆರ್‌ಎಫ್‌ಒ ಚೇತನ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top