ದಾವಣಗೆರೆ; ಕ್ರಿಕೆಟ್ ಬೆಟ್ಟಿಂಗ್ ಜೂಜಾಟ ಆಡುತ್ತಿದ್ದ ಒರ್ವನನ್ನು ಪೊಲೀಸರು ಬಂಧಿಸಿದ್ದಾರೆ. ಆತನಿಂದ ಎರಡು ಮೊಬೈಲ್ ಫೋನ್ ಹಾಗೂ 58 ಸಾವಿರ ರೂಪಾಯಿ ನಗದು ವಶಕ್ಕೆ ಪಡೆದಿದ್ದಾರೆ.
ಬಡಾವಣೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ರತ್ನಮ್ಮ ಹಾಸ್ಟೆಲ್ ಮತ್ತು ಡಯೆಟ್ ಕಾಲೇಜ್ ಮಧ್ಯದ ರಸ್ತೆಯಲ್ಲಿ ಪೊಲೀಸರಿಗೆ ಸಿಕ್ಕಿ ಬಿದ್ದಿದ್ದಾನೆ. ಪ್ರಕರಣದ ಇತರೆ ಆರೋಪಿಗಳು ತಲೆ ಮರೆಸಿಕೊಂಡಿದ್ದಾರೆ. ಈ ಬಗ್ಗೆ ಬಡಾವಣೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.