Connect with us

Dvgsuddi Kannada | online news portal | Kannada news online

ದಾವಣಗೆರೆ: ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ಒಬ್ಬ ಆರೋಪಿ ಬಂಧನ

ದಾವಣಗೆರೆ

ದಾವಣಗೆರೆ: ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ಒಬ್ಬ ಆರೋಪಿ ಬಂಧನ

ದಾವಣಗೆರೆ: ಜಿಲ್ಲೆಯ ಹರಿಹರ ನಗರದ ಮನೆಯೊಂದರಲ್ಲಿ ಅಕ್ರಮ ಗಾಂಜಾ ಸೊಪ್ಪು ಮಾರಾಟ ಮಾಡುತ್ತಿದ್ದ ಒಬ್ಬ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಹರಿಹರ ನಗರದ ಆಶ್ರಯ ಕಾಲೋನಿಯ ಮನೆಯೊಂದರಲ್ಲಿ ಅಕ್ರಮವಾಗಿ ಗಾಂಜಾ ಸೊಪ್ಪು ಮಾರಾಟ ಮಾಡಲಾಗಿತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ್ದು, ಒಬ್ಬ ಆರೋಪಿಯನ್ನು ಬಂಧಿಸಲಾಗಿದೆ. ಆರೋಪಿಯಿಂದ 14 ಸಾವಿರ ಮೌಲ್ಯದ 280 ಗ್ರಾಂ ಗಾಂಜಾ ಸೊಪ್ಪು, ಒಂದು ಮೊಬೈಲ್ ವಶಕ್ಕೆ ಪಡೆಯಲಾಗಿದೆ.

ದಾವಣಗೆರೆ ಗ್ರಾಮಾಂತರ ವಿಭಾಗದ ಡಿವೈಎಸ್ ಪಿ ಕನಿಕಾ ಸಿಕ್ರಿವಾಲ್ ನೇತೃತ್ವದಲ್ಲಿ ಸಿಪಿಐ ಸತೀಶ್ ಕುಮಾರ್ , ಪಿಎಸ್ ಐ ಶಂಕರಗೌಡ ಪಾಟೀಲ್ ಹಾಗೂ ಸಿಬ್ಬಂದಿಯನ್ನೊಳಗೊಂಡ ತಂಡ ದಾಳಿ ಮಾಡಿದೆ. ಹರಿಹರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

Advertisement

ದಾವಣಗೆರೆ

Advertisement
To Top