ದಾವಣಗೆರೆ: ಶಿವಮೊಗ್ಗದಲ್ಲಿ ಶಂಕಿತ ಉಗ್ರರ ಬಂಧನ ಹಿನ್ನೆಲೆ ರಾಷ್ಟ್ರೀಯ ತನಿಖಾ ದಳ (ಎನ್ ಐಎ) ಪಿಎಫ್ ಐ ಜಿಲ್ಲಾಧ್ಯಕ್ಷ ಹಾಗೂ ಕಾರ್ಯಕರ್ತನನ್ನು ವಶಕ್ಕೆ ಪಡೆದಿದ್ದಾರೆ.
ನಗರದ ಎಂಸಿಸಿ ಎ ಬ್ಲಾಕ್‌ನ ಪಿಎಫ್ ಐ ಜಿಲ್ಲಾಧ್ಯಕ್ಷ ಇಮಾದುದ್ದೀನ್ ಮನೆ ಮೇಲೆ ಇಂದು ಬೆಳ್ಳಂಬೆಳಿಗ್ಗೆ 4 ಗಂಟೆಗೆ ದಾಳಿ ನಡೆಸಿರುವ ಎನ್ ಐಎ ಅಧಿಕಾರಿಗಳು ಆತನನ್ನು ವಶಕ್ಕೆ ಪಡೆದಿದ್ದಾರೆ. ಇನ್ನು ಹರಿಹರದ ಕಾರ್ಯಕರ್ತ ಅಬು ತಾಹೀರ್ ಎಂಬಾತನನ್ನು ವಶಕ್ಕೆ ಪಡೆದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ವಿದ್ಯಾನಗರ ಪೊಲೀಸ್ ಠಾಣೆಗೆ ಕರೆದೊಯ್ಯಲಾಗಿದೆ. ಇಮಾದುದ್ದೀನ್ ಮೇಲೆ ಮೂರು ಪ್ರಕರಣಗಳು ದಾಖಲಾಗಿದ್ದವು. ಅದೇ ರೀತಿಯಲ್ಲಿ ಶಿವಮೊಗ್ಗದಲ್ಲಿ ಕೋಮುಭಾವನೆ ಕೆರಳಿಸುವಂಥ ಪೋಸ್ಟರ್ ಅಂಟಿಸಿದ್ದ ಎಂಬ ಆರೋಪ ಇದೆ.



