ದಾವಣಗೆರೆ: 78ನೇ ಇಳಿ ವಯಸ್ಸಿನ ವೃದ್ಧನೊಬ್ಬ ತನ್ನ ಪತ್ನಿಯನ್ನೇ ಭೀಕರವಾಗಿ ಕತ್ತು ಸೀಳಿ ಕೊಲೆ ಮಾಡಿದ ಘಟನೆ ದಾವಣಗೆರೆ ನಗರದಲ್ಲಿ ನಡೆದಿದೆ.ಹೆಗಡೆ ನಗರದ ನಿವಾಸದ ವೃದ್ಧನೊಬ್ಬ ತಡ ರಾತ್ರಿ ತನ್ನ ಪತ್ನಿಯನ್ನೇ ಕೊಲೆ ಮಾಡಿದ್ದಾನೆ. ಮಲಗಿದ್ದ ಸಮಯದಲ್ಲಿ ಕೊಲೆ ನಡೆದಿದೆ. ಅಜಾದ್ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಸುದ್ದಿ ತಿಳಿದ ತಕ್ಷಣ ಅಜಾದ್ ನಗರಪೊಲೀಸ್ ಠಾಣೆ ಸಿಪಿಐ ಗಜೇಂದ್ರಪ್ಪ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ವೃದ್ಧನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.



