ದಾವಣಗೆರೆ: ಅಜಾದ್ ನಗರ 7ನೇ ಕ್ರಾಸ್ ನಲ್ಲಿರುವ ಮನೆಯೊಂದರಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟ 45 ಕ್ವಿಂಟಾಲ್ ಪಡಿತರ ಅಕ್ಕಿಯನ್ನು ಪೊಲೀಸರು ದಾಳಿ ಮಾಡಿ ವಶಪಡಿಸಿಕೊಂಡಿದ್ದಾರೆ.
ಖಚಿತ ಮಾಹಿತಿ ಮೇರೆಗೆ ಡಿಸಿಆರ್ ಬಿ ಘಟಕದ ಪೊಲೀಸ್ ಉಪಾಧೀಕ್ಷ ಬಿ ಎಸ್ ಬಸವರಾಜ್ ನೇತೃತ್ವದ ಪೊಲೀಸ್ ತಂಡ ದಾಳಿ ಮಾಡಿ, ಮನೆಯಲ್ಲಿ ಅಕ್ರಮವಾಗಿ ದಾಸ್ತಾನು ಮಾಡಿದ್ದ 45 ಕ್ವಿಂಟಾಲ್ ಪಡಿತರ ಅಕ್ಕಿ ಹಾಗೂ ಒಂದು ತೂಕ ಮಾಡುವ ಯಂತ್ರವನ್ನು ವಶಕ್ಕೆ ಪಡೆದಿದ್ದಾರೆ. ಓರ್ವ ಆರೋಪಿತನನ್ನು ಬಂಧಿಸಲಾಗಿದೆ. ಈ ಬಗ್ಗೆ ಆಜಾದ್ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.