ದಾವಣಗೆರೆ: ಲಂಚಕ್ಕೆ ಬೇಡಿಕೆ ಇಟ್ಟ ವಿಡಿಯೋ, ಆಡಿಯೋ ಆಧಾರಿಸಿ ಒಳನಾಡು ಜಲಸಾರಿಗೆ ಇಲಾಖೆಯ ನಾಲ್ವರು ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡಿದ್ದಾರೆ. ಲೋಕೋಪಯೋಗಿ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆಯ ಸಹಾಯಕ ಕಾರ್ಯಪಾಲಕ ಅಭಿಯಂತರ ನರೇಂದ್ರಬಾಬು, ಸಹಾಯಕ ಇಂಜಿನಿಯರ್ ವೀರಪ್ಪ,ಕಾರ್ಯಪಾಲಕ ಇಂಜಿನಿಯರ್ ವಿಜಯಕುಮಾರ್, ಹಾಗೂಸೂಪರಿಂಟೆಂಡೆಂಟ್ ಎಂಜಿನಿಯರ್ ಜಗದೀಶ್ ಅವರ ಮೇಲೆ ಎಫ್ಐಆರ್ ದಾಖಲಾಗಿದೆ.
ಶ್ರೀರಾಮ ಸೇನೆಯ ಮಣಿ ಸರ್ಕಾರ್ , ಆಡಿಯೋ ಹಾಗೂ ವಿಡಿಯೋ ಸಾಕ್ಷಿ ಸಮೇತ ದೂರು ನೀಡಿದ್ದರು. ಹೀಗಾಗಿ ಲೋಕಾಯುಕ್ತ ಪೊಲೀಸರುವಸ್ಥಳ ಪರಿಶೀಲಿಸಿ, ಮಹಜರು ಮಾಡಿದ್ದಾರೆ. ಮೇಲಿನ ಅಧಿಕಾರಿಗಳಿಗೂ ಸಹ
ನಾವು ಈ ಹಣವನ್ನು ಕೊಡಬೇಕು. ಕಡತಗಳಿಗೆ ಸಹಿ ಮಾಡಲು ಹಣ ಕೊಡಿ ಎಂದು ಗುತ್ತಿಗೆದಾರರಿಗೆ ಹೇಳಿದ್ದಾರೆ. ಈ ಬಗ್ಗೆ ಲಂಚ ಪಡೆಯುವಾಗ ಆಡಿಯೋ
ಹಾಗೂ ವೀಡಿಯೋ ರೆಕಾರ್ಡ್ ಮಾಡಲಾಗಿದ್ದು, ಇದೀಗ ಲೋಕಾಯುಕ್ತ ಪೊಲೀಸರು ಈ ಆಧಾರವನ್ನಾಗಿ ಇಟ್ಟುಕೊಂಡು ಎಫ್ಐಆರ್ ದಾಖಲಿಸಲಾಗಿದೆ.