ದಾವಣಗೆರೆ: ಗಾಂಜಾ ಸೇವನೆ ಮಾಡುತ್ತಿದ್ದ ಇಬ್ಬರು ಯುವಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹೊನ್ನಾಳಿ ತಾಲ್ಲೂಕಿನಲ್ಲ ಸುಂಕದಕಟ್ಟೆ ಗ್ರಾಮದ ಬಸ್ ನಿಲ್ದಾಣದ ಬಳಿ ದಾಳಿ ಮಾಡಿ ವಶಕ್ಕೆ ಪಡೆಯಲಾಗಿದೆ.
ಖಚಿತ ಮಾಹಿತಿ ಮೇರೆಗೆ ಹೊನ್ನಾಳಿ ಪೊಲೀಸ್ ಠಾಣೆ ಪೊಲೀಸ್ ನಿರೀಕ್ಷಕರು ಸಿದ್ದೇಗೌಡ ಹೆಚ್.ಎಂ ಮಾರ್ಗದರ್ಶನದಲ್ಲಿ ಪಿ.ಎಸ್.ಐ ಶಿವಕುಮಾರ್ ಮತ್ತು ಸಿಬ್ಬಂದಿಯವರು ಹೊನ್ನಾಳಿ ಪೊಲೀಸ್ ಠಾಣಾ ವ್ಯಾಪ್ತಿಯ ಸುಂಕದಕಟ್ಟೆ ಗ್ರಾಮದ ಬಸ್ ನಿಲ್ದಾಣದ ಬಳಿ ಗಾಂಜಾ ಸೇವನೆ ಮಾಡುತ್ತಿದ್ದ ಯುವರನ್ನು ವಶಕ್ಕೆ ಪಡೆಯಲಾಗಿದೆ. 1) ತೇಜು ಯು.ಎಸ್, (21), ಸುಂಕದಕಟ್ಟೆ ಗ್ರಾಮ, ಹೊನ್ನಾಳಿ ತಾಲ್ಲೂಕು 2) ರಾಖೇಶ, (21), ವಾಸ ಸುಂಕದಕಟ್ಟೆ ಗ್ರಾಮ, ಹೊನ್ನಾಳಿ ತಾಲ್ಲೂಕು ರವರನ್ನು ವಶಕ್ಕೆ ಪಡೆದಿರುತ್ತಾರೆ.
ಇವರ ವಿರುದ್ಧ ಹೊನ್ನಾಳಿ ಪೊಲೀಸ್ ಠಾಣೆಯಲ್ಲಿ ಎನ್.ಡಿ.ಪಿ.ಎಸ್ ಆಕ್ಟ್ ರೀತ್ಯ ಪ್ರಕರಣ ದಾಖಲಾಗಿರುತ್ತದೆ. ಸುಂಕದಕಟ್ಟೆ ಗ್ರಾಮದ ಬಳಿ ಗಾಂಜಾ ಸೇವನೆ ಮಾಡುತ್ತಿದ್ದ ಪ್ರಕರಣವನ್ನು ಪತ್ತೆ ಮಾಡಿರುವ ಮೇಲ್ಕಂಡ ಅಧಿಕಾರಿಗಳು ಸೇರಿದಂತೆ ಸಿಬ್ಬಂದಿಗಳಾದ ದೊಡ್ಡಬಸಪ್ಪ, ಧರ್ಮಪ್ಪ, ಮೌನೇಶಾಚಾರಿ ರವರುಗಳಿಗೆ ಮಾನ್ಯ ಪೊಲೀಸ್ ಅಧೀಕ್ಷಕರು ಹಾಗೂ ಹೆಚ್ಚುವರಿ ಪೊಲೀಸ್ ಅಧೀಕ್ಷಕರಿ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.



