ದಾವಣಗೆರೆ: ವಿದ್ಯಾನಗರ ಪೊಲೀಸ್ ಠಾಣೆ ವ್ಯಾಪ್ತಿಯ ವಿವೇಕಾನಂದ ಬಡಾವಣೆಯ 6ನೇ ಮುಖ್ಯರಸ್ತೆಯ ಪಾರ್ಕ್ ಸಮೀಪದ ಸಾರ್ವಜನಿಕ ಸ್ಥಳದಲ್ಲಿ ಇಸ್ಪೀಟ್ ಆಡುತ್ತಿದ್ದ 17 ಜನರನ್ನು ಪೊಲೀಸರು ಬಂಧಿಸಿದ್ದಾರೆ. ಅವರಿಂದ 11,060 ರೂಪಾಯಿ ವಶಪಡಿಸಿಕೊಂಡಿದ್ದಾರೆ.
ಮತ್ತೊಂದು ಪ್ರಕರಣದಲ್ಲಿ ಶಾಮನೂರು ಬೈಪಾಸ್ ರಸ್ತೆಯ ರಾಸ್ತಾ ಹೋಟೆಲ್ ಸಮೀಪದ ಸಾರ್ವಜನಿಕ ಸ್ಥಳದಲ್ಲಿ ಇಸ್ಪೀಟ್ ಆಡುತ್ತಿದ್ದ 6 ಜನರನ್ನು ವಿದ್ಯಾನಗರ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಿಂದ 13,100 ನಗದು ಹಾಗೂ ಮೂರು ಬೈಕ್‌ಗಳನ್ನು ವಶಪಡಿಸಿಕೊಂಡಿದ್ದಾರೆ. ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಖಚಿತ ಮಾಹಿತಿ ಮೇರೆಗೆ ನಗರ ಡಿವೈಎಸ್‌ಪಿ ಮಲ್ಲೇಶ್ ಡಿ. ಅವರ ಮಾರ್ಗದರ್ಶನದಲ್ಲಿ ವಿದ್ಯಾನಗರ ಪಿಎಸ್‌ಐ ಪ್ರಭಾವತಿ ಮತ್ತು ಸಿಬ್ಬಂದಿ ತಂಡ ದಾಳಿ ನಡೆಸಿದೆ.



