Connect with us

Dvgsuddi Kannada | online news portal | Kannada news online

ದಾವಣಗೆರೆ: ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಆರೋಪ; ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಧ್ಯಾಪಕ ವಿರುದ್ಧ ಕೇಸ್ ದಾಖಲು

images 31

ದಾವಣಗೆರೆ

ದಾವಣಗೆರೆ: ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಆರೋಪ; ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಧ್ಯಾಪಕ ವಿರುದ್ಧ ಕೇಸ್ ದಾಖಲು

ದಾವಣಗೆರೆ: ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಧ್ಯಾಪಕನ ವಿರುದ್ಧ ಜಿಲ್ಲೆಯ ಚನ್ನಗಿರಿ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

ಚನ್ಬಗಿರಿ ಶಿವಲಿಂಗೇಶ್ವರ ಸ್ವಾಮಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಇಂಗ್ಲಿಷ್‌ ಸಹಾಯಕ ಪ್ರಾಧ್ಯಾಪಕ ಎಸ್‌.ಎಚ್‌. ಸುರೇಶ್‌ ಅಂತಿಮ ಬಿಎ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪದ ಹಿನ್ಬೆಲೆ ದೂರು ದಾಖಲಾಗಿದೆ. ಮೂರು ವರ್ಷಗಳಿಂದ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದೇನೆ.ಎರಡನೇ ವರ್ಷದ ಬಿಎ ವ್ಯಾಸಂಗ ಮಾಡುತ್ತಿರುವ ಸಂದರ್ಭದಲ್ಲಿ ನಾನೊಬ್ಬಳೇ ತಗರತಿಯ ಕೊಠಡಿಯಲ್ಲಿ ಕುಳಿತು ಓದುತ್ತಿರುವಾಗ ಸಹಾಯಕ ಪ್ರಾಧ್ಯಾಪಕ ಸುರೇಶ್‌ ಅವರು ನನ್ನ ಜತೆ ಅಸಭ್ಯವಾಗಿ ವರ್ತಿಸಿ, ನನ್ನ ಗಲ್ಲವನ್ನು ಸವರಿದ್ದರು. ಆಗ ಅವರಿಗೆ ಬೈದು ಸುಮ್ಮನಾಗಿದ್ದೆ ಎಂದು ಯುವತಿ ನೀಡಿರುವ ದೂರಿನಲ್ಲಿ ವಿವರಿಸಿದ್ದಾರೆ.

ಜುಲೈ 18ರಂದು ಬಿಎ ಅಂತಿಮ ವರ್ಷದ ಇಂಗ್ಲಿಷ್‌ ಪರೀಕ್ಷೆ ಬರೆಯುತ್ತಿರುವ ಸಮಯದಲ್ಲಿ ತರಗತಿ ಮೇಲ್ವಿಚಾರಕರಾಗಿ ಬಂದಿದ್ದ ಈ ಪ್ರಾಧ್ಯಾಪಕರು ಪ್ರಶ್ನೆ ಪತ್ರಿಕೆಯನ್ನು ಕೊಟ್ಟು ಸಹಿ ಮಾಡಿಸುವಾಗ ನನ್ನ ಎದೆ, ಬೆನ್ನನ್ನು ಮುಟ್ಟಿ ಬಟ್ಟೆಯನ್ನು ಎಳೆದಾಡಿದರು. ಈ ವಿಷಯವನ್ನು ತನ್ನ ತಾಯಿಗೆ ತಿಳಿಸಿ, ಪ್ರಾಧ್ಯಾಪಕರ ವಿರುದ್ಧ ಕಾನೂನು ಕ್ರಮಕ್ಕೆ ಒತ್ತಾಯಿಸಿದ್ದಾರೆ.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top