ದಾವಣಗೆರೆ: ರಾತ್ರಿ ಮನೆ ಮುಂದೆ ನಿಲ್ಲಿಸಿದ್ದ ಬೈಕ್ ಕಳ್ಳತನ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧನ ಮಾಡಿದ್ದು, ವಿವಿಧ ಪೊಲೀಸ್ ಠಾಣೆಯಲ್ಲಿ ದಾಖಲಾದ ಆರು ಪ್ರಕರಣದಿಂದ 2.80 ಲಕ್ಷ ಮೌಲ್ಯದ 6 ಬೈಕ್‌ಗಳನ್ನು ವಶಕ್ಕೆ ಪಡೆಯಲಾಗಿದೆ.
ಶಾಮನೂರಿನ ಅನಿಲ್ ಕುಮಾರ್ ಎಂಬುವವರು ಜು.17 ರಂದು ರಾತ್ರಿ ತಮ್ಮ ಮನೆ ಮುಂದೆ ನಿಲ್ಲಿಸಿದ್ದ ಬೈಕ್, ಮರು ದಿನ ಬೆಳಗ್ಗೆ ಇರಲಿಲ್ಲ. ಯಾರೋ ಕಳ್ಳತನ ಮಾಡಿಕೊಂಡು ಹೋಗಿದ್ದಾರೆ ಎಂದು ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಈ ಪ್ರಕರಣದಲ್ಲಿ ಕಳುವಾದ ಮಾಲು ಮತ್ತು ಆರೋಪಿತರನ್ನು ಪತ್ತೆ ಮಾಡಲು ಹೆಚ್ಚುವರಿ ಪೊಲೀಸ್ ಅಧೀಕ್ಷಕ ಆರ್.ಬಿ ಬಸರಗಿ ಹಾಗೂ ದಾವಣಗೆರೆ ನಗರ ಉಪ ವಿಭಾಗದ ಡಿವೈಎಸ್‌ಪಿ ಮಲ್ಲೇಶ್ ದೊಡ್ಡಮನಿ ಮಾರ್ಗದರ್ಶನದಲ್ಲಿ, ವಿದ್ಯಾನಗರ ಪೊಲೀಸ್ ಠಾಣೆಯ ಪ್ರಭಾರ ತನಿಖಾಧಿಕಾರಿ ಯಶವಂತ್‌ಕುಮಾರ್ , ವಿದ್ಯಾನಗರ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಪ್ರಭಾವತಿ.ಸಿ.ಶೇತಸನದಿ ನೇತೃತ್ವದಲ್ಲಿ ವಿದ್ಯಾನಗರ ಪೊಲೀಸ್ ಠಾಣೆ ಸಿಬ್ಬಂದಿಯನ್ನೊಳಗೊಂಡ ತಂಡ ಆರೋಪಿಗಳನ್ನು ಬಂಧಿಸಲಾಗಿದೆ.
ಬೈಕ್ ಕಳ್ಳತನದ ಆರೋಪಿಗಳಾದ ರಾಘವೇಂದ್ರ ಎಸ್ @ ರಾಜಾಹುಲಿ @ ರಘು(22) ವರ್ಷ, ಆಟೋ ಡ್ರೈವರ್, ವಾಸ- ಮಲ್ಲಶೇಟ್ಟಿಹಳ್ಳಿ ಗ್ರಾಮ, ದಾವಣಗೆರೆ ತಾಲ್ಲೂಕ್ ಮತ್ತು ಜಿಲ್ಲೆ ಮತ್ತು ಪ್ರಮೋದ್.ವಿ, (23)ವರ್ಷ, ಕೂಲಿ ಕೆಲಸ, ವಾಸ- ನಾಗನೂರು ರಸ್ತೆ, ಶಾಮನೂರಿನ ಆರೋಪಿಗಳಾಗಿದ್ದಾರೆ. ವಿದ್ಯಾನಗರ ಪೊಲೀಸ್ ಠಾಣೆಯ 1 ಪ್ರಕರಣ, ಮಾಯಕೊಂಡ ಪೊಲೀಸ್ ಠಾಣೆಯ 1 ಪ್ರಕರಣಗಳು, ಹದಡಿ ಪೊಲೀಸ್ ಠಾಣೆಯ 2 ಪ್ರಕರಣ, ರಾಣೆಬೆನ್ನೂರು ಟೌನ್ ಪೊಲೀಸ್ ಠಾಣೆಯ 1 ಪ್ರಕರಣ, ದಾವಣಗೆರೆ ಬಡಾವಣೆ ಪೊಲೀಸ್ ಠಾಣೆಯ 1 ಪ್ರಕರಣ ಸೇರಿ ಒಟ್ಟು ರೂ 2,80,000/- ಬೆಲೆಯ 06 ವಿವಿಧ ಕಂಪನಿಯ ಬೈಕ್‌ಗಳನ್ನು ವಶಕ್ಕೆ ಪಡೆಯಲಾಗಿದೆ. ತನಿಖೆ ಮುಂದುವರೆದಿರುತ್ತದೆ. ಪ್ರಕರಣದ ಕಾರ್ಯಾಚರಣೆ ನಡೆಸಿದ ತಂಡವನ್ನು ಪೊಲೀಸ್ ಅಧೀಕ್ಷಕ ಡಾ.ಅರುಣ್.ಕೆ ಶ್ಲಾಘಿಸಿದ್ದಾರೆ.



