ದಾವಣಗೆರೆ: ಅಶ್ಲೀಲ ವಿಡಿಯೋ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡುವ ಬೇದರಿಕೆ ಹಾಕಿದ್ದ ಹಿನ್ನೆಲೆಯಲ್ಲಿ ಮನನೊಂದು ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿನಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾಳೆ.
ದಾವಣಗೆರೆ ಜಿಲ್ಲೆಯ ಜಗಳೂರು ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ. ಯುವಕರಿಬ್ಬರ ಬ್ಲ್ಯಾಕ್ಮೇಲ್ಗೆ ಹೆದರಿ ಆತ್ಮಹತ್ಯೆಗೆ ಯತ್ನಿಸಿದ್ದ 17 ವರ್ಷ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೇ ಮಣಿಪಾಲ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾಳೆ. ಶಾಲೆಗೆ ಹೋಗುವಾಗ ಪರಿಚಯವಾಗಿದ್ದ ಇಬ್ಬರು ಯುವಕರು, ಒಂದು ದಿನ ಬೇಕರಿ ತಿನಿಸಿನಲ್ಲಿ ಮತ್ತು ಬರುವ ಔಷಧಿ ಹಾಕಿ ಬಳಿಕ ಆಶ್ಲೀಲ ವಿಡಿಯೋ ಮಾಡಿಕೊಂಡಿದ್ದರು. ಬಳಿಕ ಆ ವಿಡಿಯೋ ಇಟ್ಟುಕೊಂಡು ಬ್ಲ್ಯಾಕ್ ಮೇಲ್ ಮಾಡುತ್ತಿದ್ದರು. ಇದರಿಂದ ಮನನೊಂದು ವಿದ್ಯಾರ್ಥಿನಿ ಬೆಂಕಿ ಹಚ್ಚಿಕೊಂಡಿದ್ದಳು.
ತೀವ್ರವಾಗಿ ಗಾಯಗೊಂಡಿದ್ದ ವಿದ್ಯಾರ್ಥಿನಿ ಕೂಡಲೇ ಕುಟುಂಸ್ಥರು ಆಸ್ಪತ್ರೆಗೆ ದಾಖಲಿಸಿದ್ದರು. ಆದ್ರೆ, ಇದೀಗ ವಿದ್ಯಾರ್ಥಿ ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾಳೆ. ಆರೋಪಿಗಳಿಗೆ ಶಿಕ್ಷೆ ಆಗಲಿ ಎಂದು ವಿದ್ಯಾರ್ಥಿನಿ ಆತ್ಮಹತ್ಯೆ ಬಳಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವೇಳೆ ನೀಡಿದ್ದ ವಿಡಿಯೋ ಹೇಳಿಕೆ ದಾಖಲಿಸಿದ್ದಾಳೆ.