ದಾವಣಗೆರೆ: ಇಸ್ಪೀಟ್ ಜೂಜು ಅಡ್ಡೆ ಮೇಲೆ ದಾಳಿ ನಡೆದಿದ್ದು, ಜೂಜಾಟದಲ್ಲಿ ತೊಡಗಿದ್ದ ಒಟ್ಟು 7 ಜನರನ್ನು ಹಿಡಿದು 43,530 ರೂ ನಗದು ಹಣವನ್ನು ದಾವಣಗೆರೆಯ ಸಿಇಎನ್ ಅಪರಾಧ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಜಿಲ್ಲೆಯ ಚನ್ನಗಿರಿ ತಾಲ್ಲೂಕ್ ಕತ್ತಲಗೆರೆ ಗ್ರಾಮದ ಕಡೆಯಿಂದ ಕೂಲಂಬಿ ಗ್ರಾಮದ ಕಡೆಗೆ ಹೋಗುವ ರಸ್ತೆಯ ಪಕ್ಕದಲ್ಲಿರುವ ಜಮೀನುಗಳಿಗೆ ಹೋಗುವ ಕಾಲು ದಾರಿಯ ಸಾರ್ವಜನಿಕ ಸ್ಥಳದಲ್ಲಿ ಇಸ್ಪೀಟ್ ಜೂಜಾಟ ಆಡುತ್ತಿರುವ ಬಗ್ಗೆ ಮಾಹಿತಿ ದಾಳಿ ಮಾಡಲಾಗಿದೆ.
ಸಿಇಎನ್ ಅಪರಾಧ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಪ್ರಸಾದ್ ಪಿ ಹಾಗೂ ಸಿಬ್ಬಂದಿಯವರಾದ ಪ್ರಕಾಶ, ಗೋವಿಂದರಾಜ್, ಅಂಜಿನಪ್ಪ, ಮುತ್ತುರಾಜ್, ಮಂಜುನಾಥ ಮಠೋಳಿ, ಮಲ್ಲಿಕಾರ್ಜುನ ಹಾದಿಮನಿ, ಸಚಿನ್, ಲಿಂಗರಾಜ್ ಒಳಗೊಂಡ ತಂಡ ಸ್ಪೀಟ್ ಜೂಜಾಟದಲ್ಲಿ ತೊಡಗಿದ್ದ ಒಟ್ಟು 7 ಜನರನ್ನು ಹಿಡಿದೆ. ಆರೋಪಿಗಳಿಂದ ಜೂಜಾಟದಲ್ಲಿ ತೊಡಗಿಸಿದ್ದ ಒಟ್ಟು 43,530 ರೂ. ನಗದು ಹಣ ಮತ್ತು ಇಸ್ಪೀಟ್ ಜೂಜಾಟದ ಸಾಮಾಗ್ರಿಗಳನ್ನು ವಶಪಡಿಸಿಕೊಂಡಿದ್ದಾರೆ. ಈ ಸಂಬಂಧ ದಾವಣಗೆರೆ ಸಿ.ಇ.ಎನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾರ್ಯಾಚರಣೆ ನಡೆಸಿದ ತಂಡಕ್ಕೆ ಎಸ್ಪಿಉಮಾ ಪ್ರಶಾಂತ್ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.
ಸೆ.23ರವರೆಗೆ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ; ಈ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ
ದಾವಣಗೆರೆ: ಪ್ರಧಾನಿ ನರೇಂದ್ರ ಮೋದಿ ಹುಟ್ಟು ಹಬ್ಬಕ್ಕೆ ದುರ್ಗಾಂಬಿಕಾ ದೇವಿಗೆ ವಿಶೇಷ ಪೂಜೆ



