ಬೆಂಗಳೂರು: ಪ್ರಗತಿಪರ ಲೇಖಕರು, ಚಿಂತಕರು, ಸಾಹಿತಿಗಳಿಗೆ ಬೆದರಿಕೆ ಪತ್ರಗಳನ್ನು ಬರೆದ ಪ್ರಕರಣಕ್ಕೆ ಸಬಂಧಿಸಿದಂತೆ ಸಿಸಿಬಿ ಪೊಲೀಸರು ಆರೋಪಿಯನ್ನು ಪತ್ತೆ ಹಚ್ಚಿದ್ದಾರೆ. ದಾವಣಗೆರೆ ಮೂಲದ ಶಿವಾಜಿರಾವ್ ಎಂಬಾತನನ್ನ ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಶಿವಾಜಿರಾವ್ ಹಿಂದೂ ಸಂಘಟನೆಯೊಂದರಲ್ಲಿ ಗುರುತಿಸಿಕೊಂಡಿದ್ದು, ಸಿಸಿಬಿ ವಿಚಾರಣೆ ವೇಳೆ ಬೆದರಿಕೆ ಪತ್ರ ಬರೆದಿದ್ದಾಗಿ ಒಪ್ಪಿಕೊಂಡಿದ್ದಾನೆ.
ಒಂದೂವರೆ ವರ್ಷದ ಬಳಿಕ ವಿವಿಧ ಪೊಲೀಸ್ ಠಾಣೆಯಲ್ಲಿ ದಾಖಲಾದ ಪ್ರಕರಣದ ಆರೋಪಿ ಪತ್ತೆಗೆ ಹುಡುಕಾಟ ನಡೆಸಲಾಗುತ್ತಿತ್ತು. ಇದೀಗ ಆರೋಪಿ ಬಂಧಿಸಲಾಗಿದೆ. ಕೆಲ ಸಾಹಿತಿಗಳು ಹಿಂದೂ ಧರ್ಮದ ವಿರೋಧಿ ಹೇಳಿಕೆ ನೀಡುತ್ತಿದ್ದರು ಅವರಿಗೆ ಬೆದರಿಕೆ ಪತ್ರ ಬರೆದೆ ಎಂದು ಶಿವಾಜಿರಾವ್ ಹೇಳಿದ್ದಾನೆ. ಸದ್ಯ ಸಿಸಿಬಿ ಪೊಲೀಸರು ಶಿವಾಜಿರಾವ್ ಅವರ ಹಿನ್ನೆಲೆ ಬಗ್ಗೆ ಮಾಹಿತಿ ಕಲೆಹಾಕುತ್ತಿದ್ದಾರೆ. ಶಿವಾಜಿರಾವ್ ಇದುವರೆಗೂ ಏಳು ಪತ್ರಗಳನ್ನು ಬರೆದಿದ್ದಾಗಿ ಒಪ್ಪಿಕೊಂಡಿದ್ದಾನೆ. ಸದ್ಯ ಸಿಸಿಬಿ ಪೊಲೀಸರು ಆರೋಪಿಯನ್ನ 10 ದಿನಗಳ ಕಾಲ ಕಸ್ಟಡಿಗೆ ಪಡೆದಿದ್ದಾರೆ.
- ಯಾವ ಸಾಹಿತಿಗಳಿಗೆ ಬೆದರಿಕೆ ಪತ್ರ…?
- ಕುಂ.ವೀರಭದ್ರಪ್ಪ (ಕೊಟ್ಟೂರು ಪೊಲೀಸ್ ಠಾಣೆ- 2022)
- ಬಿ ಎಲ್ ವೇಣು – (ಚಿತ್ರದುರ್ಗ ಬಡಾವಣೆ ಪೊಲೀಸ್ ಠಾಣೆ-2022)
- ಬಂಜಗೇರಿ ಜಯಪ್ರಕಾಶ್ – (ಹಾರೋಹಳ್ಳಿ ಪೊಲೀಸ್ ಠಾಣೆಯಲ್ಲಿ ಎರಡು ಕೇಸ್ 2022 ಹಾಗೂ 2023)
- ಬಿ.ಟಿ ಲಲಿತಾ ನಾಯಕ್ – (ಸಂಜಯನಗರ ಪೊಲೀಸ್ ಠಾಣೆ 2022)
- ವಸುಂಧರ ಭೂಪತಿ – (ಬಸವೇಶ್ವರ ನಗರ
- ಪೊಲೀಸ್ ಠಾಣೆ ಎರಡು ಕೇಸ್ 2022-2023)
ಪೊಲೀಸರು ಈ ಎಲ್ಲಾ ಬೆದರಿಕೆ ಪತ್ರಗಳನ್ನು ಎಫ್ಎಸ್ಎಲ್ಗೆ ರವಾನೆ ಮಾಡಿದ್ದರು. ಎಫ್ಎಸ್ಎಲ್ ವರದಿಯಲ್ಲಿ ಎಲ್ಲಾ ಪತ್ರಗಳನ್ನು ಒಬ್ಬರೇ ಬರೆದಿರುವುದು ದೃಢವಾಗಿತ್ತು. ಹೀಗಾಗಿ 2023 ರ ಆಗಸ್ಟ್ನಲ್ಲಿ ಪ್ರಕರಣವನ್ನು ಸಿಸಿಬಿಗೆ ವರ್ಗಾವಣೆ ಮಾಡಲಾಗಿತ್ತು.15ಕ್ಕೂ ಹೆಚ್ಚು ಲೇಖಕರಿಗೆ ಒಂದು ವರ್ಷದಿಂದ ಬೆದರಿಕೆ ಪತ್ರಗಳು ಬಂದಿವೆ. ಈ ಹಿನ್ನೆಲೆಯಲ್ಲಿ ಕೆಲ ದಿನಗಳ ಹಿಂದೆ ಬೆದರಿಕೆ ಪತ್ರ ವಿಚಾರವನ್ನು ಗಂಭೀರವಾಗಿ ಪರಿಗಣಿಸಬೇಕು. ಆರೋಪಿಗಳನ್ನು ಪತ್ತೆ ಮಾಡಿ ಕ್ರಮ ಕೈಗೊಳ್ಳಬೇಕು ಎಂದು ಸಾಹಿತಿಗಳು ಗೃಹ ಸಚಿವ ಡಾ.ಜಿ. ಪರಮೇಶ್ವರ ಅವರನ್ನು ಭೇಟಿಯಾಗಿ ಮಾಡಿದ್ದರು.