ದಾವಣಗೆರೆ: ಜಿಲ್ಲೆಯ ಹರಿಹರ ನಗರದಲ್ಲಿ ಮನೆ ಕಳ್ಳತನ ಮಾಡುತ್ತಿದ್ದ ಆರೋಪಿಯನ್ನು ಹರಿಹರ ನಗರ ಪೊಲೀಸರು ಬಂಧನ ಮಾಡಿದ್ದು, ಆರೋಪಿಯಿಂದ 4.80 ಲಕ್ಷ ಬೆಲೆಯ 80 ಗ್ರಾಂ ಚಿನ್ನಾಭರಣ ವಶಪಡಿಸಿಕೊಳ್ಳಲಾಗಿದೆ.
ಹರಿಹರ ನಗರದ ಜೆ.ಸಿ.ಬಡಾವಣೆಯಲ್ಲಿ ಮನೆಕಳ್ಳತನ ಪ್ರಕರಣ ನಡೆದಿದ್ದು, ಈ ಸಂಬಂಧ ಹರಿಹರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದ ಆರೋಪಿ ಪತ್ತೆಗೆ ಡಿವೈಎಸ್ಪಿ ಬಸವರಾಜ ಬಿ.ಎಸ್ ಪೊಲೀಸ್ ಮಾರ್ಗದರ್ಶನದಲ್ಲಿ ತನಿಖಾಧಿಕಾರಿ ಬಿ ದೇವಾನಂದ ಪೊಲೀಸ್ ನೇತೃತ್ವದಲ್ಲಿ ಅಧಿಕಾರಿ-ಸಿಬ್ಬಂದಿಗಳು ಒಳಗೊಂಡ ತಂಡವನ್ನು ರಚಿಸಲಾಗಿತ್ತು. ಈ ತಂಡವು ಮನೆಕಳ್ಳತನ ಪ್ರಕರಣಕ್ಕೆ ಸಂಬAಧಿಸಿದಂತೆ ಆರೋಪಿ ವೆಂಕಟೇಶ @ ತಿಪ್ಪೆ, ವಾಸ: ವಿನೋಬನಗರ, ತುರುವೆಕೆರೆ ತುಮಕೂರು ಜಿಲ್ಲೆ ಈತನನ್ನು ಬಂಧಿಸಲಾಗಿದೆ. ಆರೋಪಿಯಿಂದ 4,80,000 ರೂ ಬೆಲೆಯ 80 ಗ್ರಾಂ ಬಂಗಾರದ ಆಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ.
ಮನೆಕಳ್ಳತನ ಪ್ರಕರಣದಲ್ಲಿ ಆರೋಪಿತ ಪತ್ತೆ ಹಾಗೂ ಸ್ವತ್ತನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾದ ತಂಡಕ್ಕೆ ಎಸ್ಪಿ ಉಮಾ ಪ್ರಶಾಂತ ಐಪಿಎಸ್, ಹೆಚ್ಚುವರಿ ಎಸ್ಪಿ ರಾಮಗೊಂಡ ಬಿ ಬಸರಗಿ ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ವಿಶೇಷ ಸೂಚನೆ: ಸಾರ್ವಜನಿಕರು ತಮ್ಮ ಮನೆಗಳಿಗೆ ಬೀಗ ಹಾಕಿಕೊಂಡು ಬೇರೆ ಬೇರೆ ಊರುಗಳಿಗೆ ಹೋಗುವಾಗ ಮನೆಯಲ್ಲಿ ಬೆಲೆಬಾಳುವ ವಸ್ತುಗಳನ್ನು ಬಿಟ್ಟು ಹೋಗಬಾರದು ಹಾಗೂ ಬೀಗ ಹಾಕಿಕೊಂಡು ಹೋಗುವ ಬಗ್ಗೆ ಮುಂಚಿತವಾಗಿ ಪೊಲೀಸ್ ಠಾಣೆಗೆ ಮಾಹಿತಿ ನೀಡಿದಲ್ಲಿ ನಿಮ್ಮ ಮನೆಗಳ ಕಡೆಗೆ ಹೆಚ್ಚಿನ ಗಸ್ತು ಕರ್ತವ್ಯ ನಿರ್ವಹಿಸಲಾಗುವುದು.