ದಾವಣಗೆರೆ: ಜಿಲ್ಲೆಯ ಹೊನ್ನಾಳಿ ತಾಲೂಕಿನ ಅರಕೆರೆ ಗ್ರಾಮದ ಪಿಎಲ್ಡಿ ಬ್ಯಾಂಕ್ ಉಪಾಧ್ಯಕ್ಷ ಗುತ್ಯಪ್ಪ ಮೇಲೆ ದಾಳಿ ನಡೆಸಿ ಸಾವಿಗೆ ಕಾರಣವಾಗಿದ್ದ ಮಂಗನನ್ನು ಅರಣ್ಯ ಇಲಾಖೆ ಸಿಬ್ಬಂದಿ ಸೆರೆಹಿಡಿದಿದ್ದಾರೆ.
ಗುತ್ಯಪ್ಪ (60) ನಿನ್ನೆ ಮಂಗನ ದಾಳಿಗೆ ಸಾವನ್ನಪ್ಪಿದ್ದರು. ಮುಂಜಾನೆ ವೇಳೆ ಮನೆಯಿಂದ ಹೊರಗೆ ಬಂದಾಗ ಮಂಗ ದಾಳಿ ನಡೆಸಿತ್ತು. ಗಂಭೀರವಾಗಿ ಗಾಯಗೊಂಡಿದ್ದ ಗುತ್ಯಪ್ಪ ಅವರನ್ನು ಕೂಡಲೇ ಆಸ್ಪತ್ರೆಗೆದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದರು.
ಅರಣ್ಯ ಇಲಾಖೆ ಅಧಿಕಾರಿಗಳಿಗೆ ಕೂಡಲೇ ಕೋತಿಯನ್ನು ಸೆರೆ ಹಿಡಿಯುವಂತೆ ಗ್ರಾಮಸ್ಥರು ಒತ್ತಾಯಿಸಿದ್ದರು. ಅದರಂತೆ, ಕಳೆದ ಎರಡುಗಳ ದಿನಗಳಿಂದ ಕಾರ್ಯಾಚರಣೆ ಆರಂಭಿಸಿದ್ದ ಅಧಿಕಾರಿಗಳು, ಸಿಬ್ಬಂದಿ ಗ್ರಾಮಸ್ಥರ ಸಹಾಯದೊಂದಿಗೆ ಇಂದು ಕೋತಿಯನ್ನು ಸೆರೆ ಹಿಡಿದಿದ್ದಾರೆ.ಇದೇ ವೇಳೆ ಸಾವನ್ನಪ್ಪಿದ ವ್ಯಕ್ತಿಯ ಕುಟುಂಬಕ್ಕೆ ಪರಿಹಾರ ನೀಡುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ.



