ದಾವಣಗೆರೆ: ಕ್ರಿಕೆಟ್ ಬೆಟ್ಟಿಂಗ್ ಜೂಜಾಟ ಅಡ್ಡೆ ಮೇಲೆ ಪೊಲೀಸ್ ದಾಳಿ ಮಾಡಿದ್ದು, ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಆರೋಪಿಗಳಿಂದ 34,200 ರೂ. ನಗದು ವಶಕ್ಕೆ ಪಡೆಯಲಾಗಿದೆ.
ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳ ನಡುವೆ 20-20 ಕ್ರಿಕೆಟ್ ಪಂದ್ಯಾವಳಿ ನಡೆಯುತ್ತಿದ್ದ ಸಂದರ್ಭದಲ್ಲಿ ಕ್ರಿಕೆಟ್ ಬೆಟ್ಟಿಂಗ್ ಜೂಜಾಟದಲ್ಲಿ ತೊಡಗಿದ್ದ ಆರೋಪಿಗಳಾದ 1) ಇಮ್ತಿಯಾಜ್ ಹಾಗೂ 2)ಇಸ್ಮಾಯಿಲ್ ಜಬಿವುಲ್ಲಾ ಹಿಡಿದು ಕ್ರಿಕೆಟ್ ಬೆಟ್ಟಿಂಗ್ ಜೂಜಾಟದಲ್ಲಿ ತೊಡಗಿಸಿದ್ದ ಒಟ್ಟು 34,200/- ನಗದು ಹಣವನ್ನು ಅಮಾನತ್ತು ಪಡಿಸಿಕೊಳ್ಳಲಾಗಿದೆ. ಈ ಸಂಬಂಧ ಆರೋಪಿತರ ವಿರುದ್ಧ ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಎಸ್ಪಿ ಉಮಾ ಪ್ರಶಾಂತ್ ಮಾರ್ಗದರ್ಶನದಲ್ಲಿ ಜಿಲ್ಲಾ ಪೊಲೀಸ್ ಕಚೇರಿಯ ಡಿಸಿ ಆರ್ ಬಿ ಘಟಕದ ಪ್ರಭಾರ ಪೊಲೀಸ್ ನಿರೀಕ್ಷಕ ರುದ್ರಪ್ಪ ಎಲ್ ನೇತೃತ್ವದಲ್ಲಿ ಡಿಸಿ ಆರ್ ಬಿ ಘಟಕದ ಸಿಬ್ಬಂದಿಗಳ ತಂಡ ದಾಳಿ ಮಾಡಿದೆ. ವಿದ್ಯಾನಗರ ಪೊಲೀಸ್ ಠಾಣೆ ವ್ಯಾಪ್ತಿಯ ಸಪ್ತಗಿರಿ ಶಾಲೆ ಹತ್ತಿರ, ಕುಂದುವಾಡ ಕೆರೆಗೆ ಹೋಗುವ ರಸ್ತೆಯ ಸಾರ್ವಜನಿಕ ಸ್ಥಳದಲ್ಲಿ ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ.



