ದಾವಣಗೆರೆ: ಜಿಲ್ಲೆಯ ಜಗಳೂರು ತಾಲ್ಲೂಕಿನ ಸಿದ್ದಮ್ಮನಹಳ್ಳಿ ಗ್ರಾಮದ ಕಿರಾಣಿ ಅಂಗಡಿಯೊಂದರಲ್ಲಿ ಅಕ್ರಮವಾಗಿ ಮದ್ಯ ಮಾರಾಟ ನಡೆಯುತ್ತಿದೆ ಎಂಬ ಮಾಹಿತಿ ಮೆರೆಗೆ ಹರಿಹರ ವಲಯ ಮತ್ತು ದಾವಣಗೆರೆ ವಲಯ ಅಬಕಾರಿ ಇಲಾಖೆ ಅಧಿಕಾರಿ ಹಾಗೂ ಸಿಬ್ಬಂದಿ ದಾಳಿ ನಡೆಸಿದ್ದಾರೆ.
ಸಿದ್ದಮ್ಮನಹಳ್ಳಿ ಗ್ರಾಮದ ಮಂಜುನಾಥ್ ಎಂಬ ವ್ಯಕ್ತಿಯ ಕಿರಾಣಿ ಅಂಗಡಿ ಮೇಲೆ ದಾಳಿ ನಡೆದಿದ್ದು, ದಾಳಿ ವೇಳೆ ರೂ.10,110 ಮೌಲ್ಯದ ಅಕ್ರಮ ಮಾರಾಟದ ಮದ್ಯ ವಶಪಡಿಸಿಕೊಳ್ಳಲಾಗಿದೆ. ಜಿಲ್ಲಾ ಅಬಕಾರಿ ಉಪಾಯುಕ್ತರ ನೇತೃತ್ವದಲ್ಲಿ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಲಾಗಿದೆ.
ಒಂದು ಲೀಟರ್ ಸಾಮರ್ಥ್ಯದ 76 ನೀರಿನ ಬಾಟಲಿಗಳಲ್ಲಿ 76 ಲೀಟರ್ ಸೇಂದಿ, ಒರಿಜಿನಲ್ ಚಾಯ್ಸ್ ವಿಸ್ಕಿಯ 90 ಮಿಲಿಯ 48 ಟೆಟ್ರೋಪ್ಯಾಕೇಟ್` ಮತ್ತು 500 ಮಿಲಿಯ ಪವರ್ ಕೂಲ್ 6 ಟಿನ್‍ಗಳನ್ನು ಇಲಾಖಾ ವಶಕ್ಕೆ ಪಡೆಯಲಾಗಿದೆ. ಆರೋಪಿಯಾದ ಮಂಜುನಾಥ್‍ನ್ನು ನೋಟೀಸ್ ನೀಡಿ ಬಿಡುಗಡೆಗೊಳಿಸಲಾಗಿದೆ ಎಂದು ಜಿಲ್ಲಾ ಅಬಕಾರಿ ಉಪ ಆಯುಕ್ತೆ ಸ್ವಪ್ನ ಆರ್.ಎಸ್ ತಿಳಿಸಿದ್ದಾರೆ.