ದಾವಣಗೆರೆ: ಅಂದರ್ ಬಾಹರ್ ಇಸ್ಪೀಟ್ ಜೂಜಾಟದಲ್ಲಿ ತೊಡಗಿದ್ದ 13 ಜನ ಬಂಧನ ಮಾಡಿದ್ದು, ಆರೋಪಿಗಳಿಂದ ಒಟ್ಟು 2,30,000/- ರೂ. ನಗದು ಹಣ ವಶಪಡಿಸಿಕೊಳ್ಳಲಾಗಿದೆ. ಈ ಸಂಬಂಧ ದಾವಣಗೆರೆ ಸಿ.ಇ.ಎನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಜಿಲ್ಲೆ ನ್ಯಾಮತಿ ತಾಲೂಕಿನ ತೀರ್ಥ ರಾಮೇಶ್ವರ ಗ್ರಾಮದ ಬಳಿ ಮಿಕಾ ಚೌಡಮ್ಮ ಕಣಿವೆ ರಸ್ತೆ ಯ ಸಾರ್ವಜನಿಕರ ಸ್ಥಳದಲ್ಲಿ ಅಕ್ರಮವಾಗಿ ಅಂದರ್ ಬಾಹರ್ ಇಸ್ಪೀಟ್ ಜೂಜಾಟ ನಡೆಯುತ್ತಿರುವ ಬಗ್ಗೆ ಮಾಹಿತಿ ಬಂದ ಮೇರೆಗೆ ಸಿಇಎನ್ ಅಪರಾಧ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್‌ಪೆಕ್ಟರ್ ಪ್ರಸಾದ್ ಪಿ ಹಾಗೂ ಸಿಬ್ಬಂದಿ ದಾಳಿ ನಡೆಸಿದೆ. 13 ಜನರನ್ನು ಹಿಡಿದು ಇವರುಗಳಿಂದ ಜೂಜಾಟದಲ್ಲಿ ತೊಡಗಿಸಿದ್ದ ಒಟ್ಟು 2,30,000/- ರೂ ನಗದು ಹಣ ವಶಕ್ಕೆ ಪಡೆಯಲಾಗಿದೆ.
ದಾಳಿಯಲ್ಲಿ ಭಾಗವಹಿಸಿದ ಅಧಿಕಾರಿಗಳಿಗೆ ಎಸ್ಪಿ ಉಮಾ ಪ್ರಶಾಂತ್ ಹಾಗೂ ಹೆಚ್ಚುವರಿ ಎಸ್ಪಿಗಳಾದ ವಿಜಯ ಕುಮಾರ್ ಎಂ ಸಂತೋಷ್ ಹಾಗೂ ಮಂಜುನಾಥ ಜಿ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.



