ದಾವಣಗೆರೆ: ಕಳ್ಳತನವಾಗಿದ್ದ 4 ಮೊಬೈಲ್ ಗಳನ್ನು CEIR ಪೋರ್ಟಲ್ ಮೂಲಕ ಪತ್ತೆ ಹಚ್ಚಿ ಮೂಲ ವಾರಸುದಾರರಿಗೆ ಪೊಲೀಸರು ಹಿಂತಿರುಗಿಸಿದ್ದಾರೆ.
ಜಿಲ್ಲೆಯಲ್ಲಿ ಮೊಬೈಲ್ ಕಳೆದುಕೊಂಡವರು ಕೂಡಲೇ ನೂತನ CEIR ಪೋರ್ಟಲ್‌ಗೆ ಬೇಟಿ ನೀಡಿ ತಮ್ಮ ಮೊಬೈಲ್ ನ ಸಂಪೂರ್ಣ ಮಾಹಿತಿ ನೀಡಿ ನೊಂದಾಯಿಸಿ ತಮ್ಮ ಮೊಬೈಲ್ ಅನ್ನು ಬ್ಲಾಕ್ ಮಾಡಿದ್ದರು. ನಂತರ ಹದಡಿ ಪೊಲೀಸ್ ಠಾಣೆಯ ಪೊಲೀಸರು ನೂತನ CEIR ವೆಬ್ ಪೋರ್ಟಲ್ ಮೂಲಕ ವಿವಿಧ ಕಂಪನಿಯ 4 ಮೊಬೈಲ್ ಗಳನ್ನು ಪತ್ತೆ ಮಾಡಿದ್ದಾರೆ.
ದಾವಣಗೆರೆ ಗ್ರಾಮಾಂತರ ಉಪ ವಿಭಾಗದ ಪೊಲೀಸ್ ಉಪಾಧಿಕ್ಷಕ ಬಸವರಾಜ್ ಬಿ ಎಸ್ ಅವರು ವಾರಸುದಾರರಿಗೆ ಮೊಬೈಲ್ ಹಿಂತಿರುಗುಸಿದರು. ಈ ಸಂಧರ್ಭದಲ್ಲಿ ಹದಡಿ ಪೊಲೀಸ್ ಠಾಣೆಯ ಪಿಎಸ್ಐ ಸಂಜೀವ್, ಉಪಸ್ಥಿತರಿದ್ದರು. ಸಾರ್ವಜನಿಕರು ತಮ್ಮ ಮೊಬೈಲ್ ಕಳುವಾದಲ್ಲಿ/ ಸುಲಿಗೆಯಾಗಿದ್ದಲ್ಲಿ/ ಕಾಣೆಯಾಗಿದ್ದಲ್ಲಿ ಕೂಡಲೇ ನೂತನ CEIR ವೆಬ್ ಪೋರ್ಟಲ್ ಗೆ ಬೇಟಿ ನೀಡಿ ನೋಂದಾಯಿಸಲು ಹಾಗೂ ಇದರ ಸದುಪಯೋಗ ಪಡೆಯಲು ಈ ಮೂಲಕ ತಿಳಿಸಲಾಗಿದೆ.



