ದಾವಣಗೆರೆ: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಅಪರಾಧಿಗೆ ದಾವಣಗೆರೆ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ಎಫ್.ಟಿ.ಎಸ್.ಸಿ-1 ನ್ಯಾಯಾಲಯ 20 ವರ್ಷ ಶಿಕ್ಷೆ ಹಾಗೂ 25,000 ರೂ. ದಂಡ ವಿಧಿಸಿದೆ.
2020ರಲ್ಲಿ ಅಪರಾಧಿ ಮಕ್ಸೂದ್ ಅಹ್ಮದ್ ಅಪ್ರಾಪ್ತ ಬಾಲಕಿಗೆ ಚಾಕ್‌ಲೇಟ್ ಆಸೆ ತೋರಿಸಿ ಅತ್ಯಾಚಾರ ಎಸಗಿದ್ದನು. ಹರಿಹರ ನಗರ ಠಾಣೆಯಲ್ಲಿ ಈ ಬಗ್ಗೆ ಪೋಕ್ಸೊ ಪ್ರಕರಣ ದಾಖಲಾಗಿತ್ತು. ಸಿಪಿಐ ಶಿವಪ್ರಸಾದ್ ಎಂ. ತನಿಖೆ ನಡೆಸಿ ಆರೋಪಿ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಈ ಪ್ರಕರಣದಲ್ಲಿ ಆರೋಪ ಸಾಬೀತಾಗಿದ್ದರಿಂದ ನ್ಯಾಯಾಧೀಶರಾದ ಶ್ರೀಪಾದ್ ಎನ್. ಅವರು ಅಪರಾಧಿಗೆ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿದೆ. ಸಂತ್ರಸ್ತೆಗೆ ಸರ್ಕಾರದಿಂದ 6 ಲಕ್ಷ ಪರಿಹಾರ ನೀಡುವಂತೆ ಇದೇ ವೇಳೆ ಆದೇಶಿಸಿದೆ.