Connect with us

Dvgsuddi Kannada | online news portal | Kannada news online

ದಾವಣಗೆರೆ: 3.64‌ ಲಕ್ಷ ಮೌಲ್ಯದ ಗಾಂಜಾ‌ ನಾಶ

IMG 20240208 151427

ದಾವಣಗೆರೆ

ದಾವಣಗೆರೆ: 3.64‌ ಲಕ್ಷ ಮೌಲ್ಯದ ಗಾಂಜಾ‌ ನಾಶ

ದಾವಣಗೆರೆ: ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಎನ್.ಡಿ.ಪಿ.ಎಸ್ ಕಾಯ್ದೆಯಡಿಯಲ್ಲಿ ದಾಖಲಾದ ಪ್ರಕರಣಗಳಲ್ಲಿ ವಶಪಡಿಸಿಕೊಂಡ 3.64‌ ಲಕ್ಷ ಮೌಲ್ಯದ ಗಾಂಜಾವನ್ನು ನಾಶ ಮಾಡಲಾಯಿತು.

ನ್ಯಾಯಾಲದಿಂದ ಡ್ರಗ್ ಡಿಸ್ಪೊಸಲ್ ಕಮಿಟಿ ಮುಖಾಂತರ ಅನುಮತಿ ಪಡೆದ 19 ಪ್ರಕರಣಗಳಿಗೆ ಸಂಬಂಧಿಸಿದಂತೆ 35 ಕೆಜಿ 409 ಗ್ರಾಂ (ಅಂದಾಜು ಮೊತ್ತ 3,64,400/- ರೂ ಗಳು) ಗಾಂಜಾವನ್ನು ನಾಶಪಡಿಸಲಾಯಿತು. ದಾವಣಗೆರೆ ಜಿಲ್ಲೆಯ ಪರಿಸರ ಅಧಿಕಾರಿಗಳು ನಿಗಧಿ ಪಡಿಸಿದ ಸ್ಥಳವಾದ ತಾಲ್ಲೂಕಿನ ಅವರಗೊಳ್ಳ ಗ್ರಾಮದಲ್ಲಿನ ಮಹಾನಗರ ಪಾಲಿಕೆ ಘನ ತ್ಯಾಜ್ಯ ವಿಲೇವಾರಿ ಘಟಕದಲ್ಲಿ ಡ್ರಗ್ ಡಿಸ್ಪೊಸಲ್ ಕಮಿಟಿ ಅಧ್ಯಕ್ಷರು ಹಾಗೂ ಎಸ್ಪಿ ಉಮಾ ಪ್ರಶಾಂತ್, ಹೆಚ್ಚುವರಿ ಎಸ್ಪಿ ಮಂಜುನಾಥ ಜಿ ಹಾಗೂ ಡಿಸ್ಪೊಸಲ್ ಕಮಿಟಿಯ ಸದಸ್ಯರುಗಳಾದ ನಗರ ಡಿವೈಎಸ್ಪಿ ಮಲ್ಲೇಶ್ ದೊಡ್ಮನಿ , ಚನ್ನಗಿರಿ ಡಿವೈಎಸ್ಪಿ ಪ್ರಶಾಂತ ಮನ್ನೋಳಿ ರವರು ಹಾಗೂ ಪಂಚರ ಉಪಸ್ಥಿತಿಯಲ್ಲಿ ನಾಶಪಡಿಸಲಾಯಿತು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top