ದಾವಣಗೆರೆ: ಹತ್ತು ದಿನಗಳ ಹಿಂದೆ ಕಾಣೆಯಾಗಿದ್ದ ವ್ಯಕ್ತಿ ಜಿಲ್ಲೆಯ ಜಗಳೂರು ತಾಲೂಕಿನ ಅಣಬೂರು ಅರಣ್ಯ ಪ್ರದೇಶದಲ್ಲಿ ಶವ ಪತ್ತೆಯಾಗಿದ್ದಾರೆ. ಜಗಳೂರು ತಾಲ್ಲೂಕಿನ ಗಾಂಧಿನಗರದ ನಿವಾಸಿ ಡಾಕ್ಯಾನಾಯ್ಕ್ ಎಂಬಾತ ಶವವಾಗಿ ಪತ್ತೆಯಾಗಿದ್ದಾನೆ.
ಅರಣ್ಯ ಇಲಾಖೆ ಸಿಬ್ಬಂದಿ ಸಾಂತಕುಮಾರ್ ನೀಡಿದ ದೂರಿನ ಮೇರೆಗೆ ಸ್ಥಳಕ್ಕೆ ಪೊಲೀಸರು ಧಾವಿಸಿದ್ದು, ಹೂತಿಟ್ಟ ಶವವನ್ನು ಹೊರ ತೆಗೆದಿದ್ದಾರೆ. ಘಟನಾ ಸ್ಥಳಕ್ಕೆ ಜಗಳೂರು ಠಾಣೆಯ ಪಿಎಸ್‌ಐ ಸಾಗರ್, ತಾಲೂಕು ದಂಡಾಧಿಕಾರಿಗಳ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ತನಿಖೆಗಾಗಿ ಘಟನಾ ಸ್ಥಳಕ್ಕೆ ವಿಧಿ ವಿಜ್ಞಾನ ತಂಡದ ಸಿಬ್ಬಂದಿ, ಬೆರಳಚ್ಚು ಸಿಬ್ಬಂದಿ ಹಾಗೂ ಶ್ವಾನದಳ ಆಗಮಿಸಿ ತನಿಖೆ ನಡೆಸುತ್ತಿದ್ದಾರೆ.



